HomeKarnatakaBIG NEWS: ಹರಿಪ್ರಸಾದ್ ಒಬ್ಬರೇ ಅಲ್ಲ; ಇನ್ನೂ ಹಲವರು ಇದ್ದಾರೆ; 50 ಜನರನ್ನು ಕರೆದುಕೊಂಡು ಬರುವ...

BIG NEWS: ಹರಿಪ್ರಸಾದ್ ಒಬ್ಬರೇ ಅಲ್ಲ; ಇನ್ನೂ ಹಲವರು ಇದ್ದಾರೆ; 50 ಜನರನ್ನು ಕರೆದುಕೊಂಡು ಬರುವ ಬಗ್ಗೆ ಮಾಹಿತಿ ಇದೆ; HDK ಹೊಸ ಬಾಂಬ್

ಹಾಸನ: ಕಾಂಗ್ರೆಸ್ ನ ಆಂತರಿಕ ಜಗಳ ತಾರಕಕ್ಕೇರಿದೆ. ಬಿ.ಕೆ.ಹರಿಪ್ರಸಾದ್ ಸಿದ್ದರಾಮಯ್ಯ ವಿರುದ್ಧ ಮತ್ತೆ ಬಹಿರಂಗವಾಗಿ ಅಸಮಾಧಾನ ಹೊರಹಾಕಿದ್ದಾರೆ. ಈ ನಡುವೆ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹೊಸ ಬಂಬ್ ಸಿಡಿಸಿದ್ದಾರೆ.

ಹಾಸನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಹೆಚ್.ಡಿ.ಕುಮಾರಸ್ವಾಮಿ, ನಾನು 50 ಜನರನ್ನು ಕರೆದುಕೊಂಡು ಬರುತ್ತೇನೆ ಎಂದು ಕೇಂದ್ರ ನಾಯಕರ ಬಳಿ ಹರಿಪ್ರಸಾದ್ ಮಾತನಾಡಿದ್ದಾರೆ ಎಂಬ ಬಗ್ಗೆ ಮಾಹಿತಿ ಇದೆ. ಇಲ್ಲಿ ಯಾರು ಯಾರಿಗೂ ನಿಷ್ಠೆ ಪ್ರಾಮಾಣಿಕತೆ ಎಂಬುದು ಇಲ್ಲ ಎಂದು ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕಾಂಗ್ರೆಸ್ ನಲ್ಲಿ ಹರಿಪ್ರಸಾದ್ ಒಬ್ಬರೇ ಅಲ್ಲ, ಇನ್ನೂ ಹಲವರು ಅಸಮಾಧಾನಿತರು ಇದ್ದಾರೆ. ಹರಿಪ್ರಸಾದ್ ಧೈರ್ಯವಾಗಿ ತಮ್ಮ ಅಸಮಾಧಾನ ಹೊರಹಾಕಿದ್ದಾರೆ ಅಷ್ಟೇ ಎಂದರು.

ಈ ಸರ್ಕಾರ ಮುಂದೆ ಏನಾಗುತ್ತೆ ಲೋಕಾಸಭಾ ಚುನಾವಣೆ ಮುಗಿದ ಬಳಿಕ ಗೊತ್ತಾಗುತ್ತದೆ. ಯಾರೂ ಪ್ರಾಮಾಣಿಕರು ಇಲ್ಲ. ಎಲ್ಲ ಅವರವರ ಅನುಕೂಲಕ್ಕೆ ತಕ್ಕಂತೆ ಮಾಡುತ್ತಾರೆ ಎಂದು ಹೇಳಿದರು. ಕುಮಾರಸ್ವಾಮಿಯವರ ಹೇಳಿಕೆ ರಾಜ್ಯ ರಾಜಕೀಯದಲ್ಲಿ ಸಂಚಲನ ಸೃಷ್ಟಿಸಿದೆ.

For Latest News Updates, Join Our Whatsapp Community🚩
RELATED ARTICLES

Most Popular