HomeKarnatakaಸಚಿವ ಸಂಪುಟ ಸೇರ್ಪಡೆಗೆ ಮ್ಯಾನೇಜ್ಮೆಂಟ್, ಪೇಮೆಂಟ್ ಕೋಟಾ ನಡೆಯುತ್ತಿದೆ: ಹೆಚ್.ಡಿ.ಕುಮಾರಸ್ವಾಮಿ ಗಂಭೀರ ಆರೋಪ

ಸಚಿವ ಸಂಪುಟ ಸೇರ್ಪಡೆಗೆ ಮ್ಯಾನೇಜ್ಮೆಂಟ್, ಪೇಮೆಂಟ್ ಕೋಟಾ ನಡೆಯುತ್ತಿದೆ: ಹೆಚ್.ಡಿ.ಕುಮಾರಸ್ವಾಮಿ ಗಂಭೀರ ಆರೋಪ

ಬೆಂಗಳೂರು: ಸಂಪುಟ ಸೇರ್ಪಡೆ ವಿಷಯದಲ್ಲಿ ಮ್ಯಾನೇಜ್ ಮೆಂಟ್ ಕೋಟಾ ನಡೆಯುತ್ತಿದೆ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಗಂಭೀರ ಆರೋಪ ಮಾಡಿದ್ದಾರೆ.

ಬೆಂಗಳೂರಿನಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಹೆಚ್.ಡಿ.ಕುಮಾರಸ್ವಾಮಿ, ಸಿಎಂ ಡಿ.ಕೆ.ಶಿವಕುಮಾರ್ ಸಂಪುಟದಲ್ಲಿ ಮಂತ್ರಿಯಾಗಲು ಮ್ಯಾನೇಜ್‌ಮೆಂಟ್ ಇಲ್ಲವೇ ಪೇಮೆಂಟ್ ಕೋಟಾದಲ್ಲಿ ಸಚಿವರಾಗಲು ದೊಡ್ಡ ಪ್ರಮಾಣದಲ್ಲಿ ಲಾಬಿ ನಡೆಯುತ್ತಿದೆ ಎಂದು ಆರೋಪಿಸಿದರು.

ಸಂಪುಟ ಆಕಾಂಕ್ಷಿಗಳಿಂದ ಸಿಎಂ ಡಿ.ಕೆ.ಶಿವಕುಮಾರ್ ವಸೂಲಿ ಮಾಡುತ್ತಿದ್ದಾರೆ. ಹೈಕಮಾಂಡ್ ಗೆ ಕೊಡಬೇಕು ಎಂದು ಶಾಸಕರಿಂದ ಹಣ ಪೀಕುತ್ತಿರುವ ಮಾಹಿತಿ ಇದೆ. ಮ್ಯಾನೆಜ್‌ಮೆಂಟ್ ಕೋಟಾಕ್ಕೆ ಶೇಕಡ 5%, ಪೇಮೆಂಟ್ ಕೋಟಾಕ್ಕೆ 95% ಸೀಟುಗಳನ್ನು ನಿಗದಿಪಡಿಸಲಾಗಿದೆ ಎಂದು ಅವರು ಹೇಳಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇಂತಹ. ಪೇಮೆಂಟ್ ಸೀಟುಗಳನ್ನು ಪಡೆಯಲು ಯಾರು ಅರ್ಹರಿರುತ್ತಾರೋ ಅಂತಹವರು ಮಾತ್ರ ಮಂತ್ರಿಯಾಗಲು ಸಾಧ್ಯ ಎಂದು ಕುಮಾರಸ್ವಾಮಿ ವ್ಯಂಗ್ಯವಾಡಿದರು. ಇದಕ್ಕಾಗಿಯೇ ಸಂಪುಟ ವಿಸ್ತರಣೆ ವಿಳಂಬವಾಗುತ್ತಿದೆ ಎಂದು ಹೇಳಿದರು.

ವೃತ್ತಿಪರ ಕೋರ್ಸುಗಳಿಗೆ ಪ್ರವೇಶ ಪಡೆಯುವುದಕ್ಕೆ ಸರ್ಕಾರಿ ಮತ್ತು ಮ್ಯಾನೇಜ್ ಮೆಂಟ್ ಕೋಟಾ ಎಂದು ಇರುತ್ತದೆ. ಆ ಬಗ್ಗೆ ನಾನು ಕೇಳಿದ್ದೇನೆ. ಆದರೆ ಕರ್ನಾಟಕದಲ್ಲಿ ಸಂಪುಟ ಸೇರ್ಪಡೆಗೆ ಹೈಕಮಾಂಡ್ ಕೋಟಾ, ಮ್ಯಾನೇಜ್ಮೆಂಟ್ ಕೋಟಾ ಎಂದು ಶುರುವಾಗಿದೆ. ಮಂತ್ರಿ ಆಗಬೇಕಾದರೆ ಕಾಸು ಕೊಡಬೇಕು. ಎಗ್ಗಿಲ್ಲದೆ ವಸೂಲಿ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular