HomeLatest NewsBIG NEWS: ಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಮತ್ತೊಂದು ಗಂಭೀರ ಆರೋಪ ಮಾಡಿದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ

BIG NEWS: ಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಮತ್ತೊಂದು ಗಂಭೀರ ಆರೋಪ ಮಾಡಿದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ

ಬೆಂಗಳೂರು: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲೆ ಜಿಲ್ಲೆಗಳಿಗೂ ಭೇಟಿ ನೀಡಿ ಅಭಿವೃದ್ಧಿ ಕಾರ್ಯಗಳ ಕುರಿತು ಪ್ರಗತಿ ಪರಿಶೀಲನೆ ನಡೆಸುತ್ತಿರುವ ವಿಚಾರವಾಗಿ ಪ್೦ರತಿಕ್ರಿಯಿಸಿರುವ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ, ಎಸ್​ಐಆರ್ ಪ್ರಕ್ರಿಯೆ​ ದುರುಪಯೋಗ ಮಾಡಿಕೊಳ್ಳ ಸಿಎಂ ಪ್ರವಾಸ ಮಾಡುತ್ತಿದ್ದಾರೆ ಎಂದು ಗಂಭೀರ ಆರೋಪ ಮಾಡಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಹೆಚ್.ಡಿ.ಕುಮಾರಸ್ವಾಮಿ, ಎಸ್ ಐಆರ್ ದುರುಪಯೋಗ ಪಡಿಸಿಕೊಳ್ಳಲು, ಅಧಿಕಾರಿಗಳಿಗೆ ಸೂಚನೆ ನೀಡಲು ಜಿಲ್ಲಾ ಪ್ರವಾಸ ಮಾಡುತ್ತಿದ್ದಾರೆ ಎಂದರು.

ರಾಜ್ಯದಲ್ಲಿ ಶಾಶ್ವತ ನಿವಾಸ ಪ್ರಮಾಣಪತ್ರ ನೀಡಲು ಸರ್ಕಾರ ಮುಂದಾಗಿರುವ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ವ್ಯಕ್ತಪಡಿಸಿರುವ ಆಕ್ಷೇಪಗಳಿಗೆ ನಮ್ಮ ಸಂಪೂರ್ಣ ಸಹಮತವಿದೆ. ನಿಜವಾದ ಮತದಾರರನ್ನು ಉಳಿಸೋಕೆ ಎಸ್‌ಐಆರ್ ಮಾಡಲಾಗುತ್ತಿದೆ. ಚುನಾವಣಾ ಆಯೋಗ ಗೊಂದಲಗಳನ್ನ ಸರಿಪಡಿಸಬೇಕು ಅನ್ನೋದು ನಮ್ಮ ಒತ್ತಾಯ ಎಂದು ಹೇಳಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಡಿ.ಕೆ ಶಿವಕುಮಾರ್​ ಪ್ರಸ್ತುತ ಮಾಡುತ್ತಿರುವ ವಿಭಾಗವಾರು ಸಭೆಗಳು ಹಾಗೂ ಜಿಲ್ಲಾ ಪ್ರವಾಸಗಳು ರಾಜ್ಯದ ಬರ ಪರಿಸ್ಥಿತಿ ನಿರ್ವಹಣೆಗಾಗಲಿ ಅಥವಾ ಅಭಿವೃದ್ಧಿ ಕೆಲಸಗಳಿಗಾಗಲಿ ಅಲ್ಲವೇ ಅಲ್ಲ. ಅಧಿಕಾರಿಗಳಿಗೆ ಎಸ್‌ಐಆರ್ ದುರುಪಯೋಗದ ಕುರಿತು ಅಗತ್ಯ ಸೂಚನೆ ಹಾಗೂ ಮಾರ್ಗದರ್ಶನ ನೀಡುವ ಏಕೈಕ ಉದ್ದೇಶದಿಂದಲೇ ಈ ಪ್ರವಾಸಗಳನ್ನ ಹಮ್ಮಿಕೊಂಡಿದ್ದಾರೆ ಎಂದು ಗುಡುಗಿದರು.

ರಾಜ್ಯದ ಹಲವೆಡೆ ಮಳೆ, ಪ್ರವಾಹದಿಂದ ಜನ ಸಂಕಷ್ಟದಲ್ಲಿದ್ದಾರೆ. ರಾಜ್ಯದಲ್ಲಿ ಹಲವು ಸಮಸ್ಯೆಗಳು ಇವೆ, ಏನು ಕ್ರಮಕೈಗೊಂಡಿದ್ದೀರಿ? ಯಾರಿಗೆ ಹೂವು ಮುಡಿಸುತ್ತೀರಿ? ನಮ್ಮ ರಾಜ್ಯದ ಜನರಿಗೆ ಹೂವು ಮುಡಿಸುವ ಕೆಲಸ ಮಾಡಬೇಡಿ ಎಂದು ಕಿಡಿಕಾರಿದ್ದಾರೆ.

ಪ್ರವಾಹ, ಬರದ ಬಗ್ಗೆ ಅಧಿಕಾರಿಗಳು ಸ್ಥಳ ಪರಿಶೀಲನೆ ಮಾಡಿದ್ದಾರಾ? ಸಾಲಮನ್ನಾ ಬಗ್ಗೆ ಮಾತಾಡ್ತೀರಿ ಈ ಕ್ಷಣದವರೆಗೆ ಆ ಕೆಲಸ ಆಗಿಲ್ಲ. ಉತ್ತರ ಕರ್ನಾಟಕ ಭಾಗದ ಹಲವು ಹಳ್ಳಿಗಳು ಸಂಕಷ್ಟದಲ್ಲಿವೆ. ಮುಖ್ಯಮಂತ್ರಿಗಳ ಬೆಳಗಾವಿ ಜಿಲ್ಲೆಯ ಪ್ರವಾಸ ಸಹ ನೋಡಿದ್ದೇನೆ, ರಾತ್ರಿ 20 ಶಾಸಕರ ಜೊತೆಗೆ ಡಿನ್ನರ್ ಪಾರ್ಟಿ ಮಾಡಿದ್ದಾರೆ. ಈ ಹಿಂದಿನ ಸಿಎಂ ಕೇಂದ್ರ ಸರ್ಕಾರದ ವಿರುದ್ಧ ಸಂಘರ್ಷ ಮಾಡಿದರು. ಈಗಿನ ಸಿಎಂ ಕಾವೇರಿ, ಗೋದಾವರಿ-ಕೃಷ್ಣಾ ಜೊಡಣೆ ಬಗ್ಗೆ ಮಾತಾಡಿದ್ದಾರೆ. ಪಕ್ಕದ ಸಿಎಂಗಳನ್ನು ಕರೆಸಿ ನಮ್ಮ ಸಿಎಂ ಫೋಟೋ ತೆಗೆಸಿಕೊಂಡರು. ತುಂಗಭದ್ರಾ ಡ್ಯಾಂನಲ್ಲಿ ಹೂಳು ತುಂಬಿದ ಬಗ್ಗೆ ಚರ್ಚೆ ಮಾಡಿದ್ರಾ? ಎಂದು ಪ್ರಶ್ನಿಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular