ಬೆಂಗಳೂರು: ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಹಲವು ದಿನಗಳ ಬಳಿಕ ಪ್ರತಿಕ್ರಿಯೆ ನೀಡಿದ್ದಾರೆ. ಮಂಜುನಾಥ ಸ್ವಾಮಿಯೇ ಅವರಿಗೆ ಶಿಕ್ಷೆ ಕೊಡುತ್ತಾನೆ ಎಂದಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಹೆಚ್.ಡಿ.ಕುಮಾರಸ್ವಾಮಿ, ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಸರ್ಕಾರ ನಡೆದುಕೊಂಡಿರುವ ರೀತಿ ಸರಿಯಿಲ್ಲ. ಸರ್ಕಾರ ನಡೆದುಕೊಂಡ ರೀತಿ ಕ್ಷೇತ್ರಕ್ಕೆ ಅವಮಾನವಾಗುವಂತಾಗಿದೆ. ಮಂಜುನಾಥನೇ ಅವರಿಗೆ ಶಿಕ್ಷೆ ಕೊಡುತ್ತಾನೆ ಎಂದು ಕಿಡಿಕಾರಿದರು.
ಪ್ರಾರಂಭಿಕ ಹಂತದಲ್ಲಿ ಸರ್ಕಾರ ಯಾವ ರೀತಿ ನಡೆದುಕೊಂಡಿತು? ಯಾರೋ ಒಬ್ಬ ಆರೋಪ ಮಾಡಿದ ತಕ್ಷಣ ಆತನ ಪೂರ್ವಾಪರ ತನಿಖೆ ಮಾಡದೇ, ಆತನ ವಿಚಾರಣೆ ನಡೆಸದೇ ಏಕಾಏಕಿ ಎಸ್ ಐತಿ ರಚಿಸಿ ಮಣ್ಣು ಅಗೆಯವ ಕೆಲಸ ಮಾಡಲಾಯಿತು. ಸರ್ಕಾರ ಪ್ರಾರಂಭಿಕವಾಗಿ ನಡೆದುಕೊಂಡ ರೀತಿ ಸರಿಯಲ್ಲ. ಇದರಲ್ಲಿ ಎಡಂಪಥೀಯ ಶಕ್ತಿಗಳು ಇದೆ ಎಂದು ಹೇಳುತ್ತಾರೆ. ಒಟ್ಟಾರೆ ಸರ್ಕಾರ ಸರಿಯಾಗಿ ನಡೆದುಕೊಂಡಿಲ್ಲ ಎಂದು ಹೇಳಿದರು.