BIG NEWS: ಮಾಜಿ ಸಿಎಂ HDK ನಿವಾಸದಲ್ಲಿ ದೀಪಾವಳಿ ದೀಪಾಲಂಕಾರಕ್ಕೆ ವಿದ್ಯುತ್ ಕಂಬದಿಂದ ಅಕ್ರಮವಾಗಿ ವಿದ್ಯುತ್ ಸಂಪರ್ಕ; ವಿದ್ಯುತ್ ಕಳ್ಳತನ ಎಂದು ಕಾಂಗ್ರೆಸ್ ಕಿಡಿ

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳ ಬಗ್ಗೆ ಸದಾ ಕಾಲ ಟೀಕಿಸುತ್ತಿರುವ ಹಾಗೂ ಸಿಎಂ ಸಿದ್ದರಾಮಯ್ಯ ಐಶಾರಾಮಿ ಜೀವನ ನಡೆಸುತ್ತಿದ್ದಾರೆ ಎಂದು ಮೊನ್ನೆಯಷ್ಟೇ ವಾಗ್ದಾಳಿ ನಡೆಸಿದ್ದ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಈಗ ತಮ್ಮ ನಿವಾಸಕ್ಕೆ ವಿದ್ಯುತ್ ದೀಪಾಲಂಕಾರ ಮಾಡಲು ಅಕ್ರಮವಾಗಿ ವಿದ್ಯುತ್ ಸಂಪರ್ಕ ಪಡೆದಿರುವುದು ಭಾರಿ ಚರ್ಚೆಗೆ ಗ್ರಾಸವಾಗಿದೆ.

ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರ ಜೆ.ಪಿ.ನಗರ ನಿವಾಸ ದೀಪಾವಳಿ ಹಿನ್ನೆಲೆಯಲ್ಲಿ ದೀಪಾಲಂಕಾರದಿಂದ ಝಗಮಗಿಸುತ್ತಿದೆ. ಇಡೀ ಮನೆಯನ್ನು ವಿದ್ಯುತ್ ದೀಪಗಳಿಂದ ಬೆಳಗಲಾಗಿದೆ. ಆದರೆ ಈ ದೀಪಾಲಂಕಾರಕ್ಕೆ ಮನೆಯ ರಸ್ತೆ ಬದಿಯಿರುವ ವಿದ್ಯುತ್ ಕಂಬದಿಂದ ನೇರವಾಗಿ ವೈರ್ ಹಾಕಿ ವಿದ್ಯುತ್ ಪಡೆಯಲಾಗಿದ್ದು, ಮಾಜಿ ಸಿಎಂ ಕಾರ್ಯವೈಖರಿಗೆ ಕಾಂಗ್ರೆಸ್ ಹಿಗ್ಗಾ ಮುಗ್ಗಾ ವಾಗ್ದಾಳಿ ನಡೆಸಿದೆ.

ಓರ್ವ ಜವಾಬ್ದಾರಿಯುತ ರಾಜಕಾರಣಿಯಾಗಿ, ಮಾಜಿ ಮುಖ್ಯಮಂತ್ರಿಗಳಾಗಿ ವಿದ್ಯುತ್ ಕಳ್ಳತನ ಮಾಡುವಂತಹ ದಾರಿದ್ರ್ಯ ಬಂದಿದ್ದು ದುರಂತ. ಕಂಬದಿಂದ ಅಕ್ರಮವಾಗಿ ವಿದ್ಯುತ್ ಸಂಪರ್ಕ ಪಡೆದು ದೀಪಾಲಂಕಾರ ಮಾಡಿದ್ದೀರಿ. ಗೃಹಜ್ಯೋತಿ ಯೋಜನೆಗೆ ಅರ್ಜಿ ಹಾಕಿದ್ದರೆ ನಾವೇ ಉಚಿತ ವಿದ್ಯುತ್ ಪೂರೈಸುತ್ತಿದ್ದೆವು ಎಂದು ಟೀಕಿಸಿದೆ. ಅಲ್ಲದೇ ಜಗತ್ತಿನ ಏಕೈಕ ಮಹಾಪ್ರಾಮಾಣಿಕ ಹೆಚ್.ಡಿ.ಕುಮರಸ್ವಾಮಿ ಈ ಬಗ್ಗೆ ಜನರಿಗೆ ಉತ್ತರ ಕೊಡಲಿ ಎಂದು ಆಗ್ರಹಿಸಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read