HomeKarnatakaBIG NEWS: ಮೈತ್ರಿ ಬೆನ್ನಲ್ಲೇ ಭಿನ್ನಮತ ಸ್ಫೋಟ; ಅಸಮಾಧಾನಿತರ ಸಭೆ ಕರೆದ ಮಾಜಿ ಸಿಎಂ ಕುಮಾರಸ್ವಾಮಿ

BIG NEWS: ಮೈತ್ರಿ ಬೆನ್ನಲ್ಲೇ ಭಿನ್ನಮತ ಸ್ಫೋಟ; ಅಸಮಾಧಾನಿತರ ಸಭೆ ಕರೆದ ಮಾಜಿ ಸಿಎಂ ಕುಮಾರಸ್ವಾಮಿ


ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ನಾಯಕರು ಮೈತ್ರಿ ಮಾಡಿಕೊಂಡ ಬೆನ್ನಲ್ಲೇ ಜೆಡಿಎಸ್ ನ ಹಲವು ಶಾಸಕರು, ಮಾಜಿ ಶಾಸಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಪಕ್ಷದ ವಿರುದ್ಧವೇ ತಿರುಗಿ ಬಿದ್ದಿರುವ ಮುಖಂಡರು, ಕಾಂಗ್ರೆಸ್ ಸೇರಲು ಮುಂದಾಗಿದ್ದಾರೆ.

ಮೈತ್ರಿ ಬಗ್ಗೆ ಬಹಿರಂಗವಾಗಿಯೇ ಅಸಮಾಧಾನ ವ್ಯಕ್ತಪಡಿಸಿರುವ ಜೆಡಿಎಸ್ ಶಾಸಕರು, ಮುಂದಿನ ನಡೆ ಬಗ್ಗೆ ಬೆಂಬಲಿಗರೊಂದಿಗೆ ಸಭೆಗಳನ್ನು ನಡೆಸಿದ್ದಾರೆ. ಈ ಹಿನ್ನೆಲೆಯಲ್ಲಿ ಜೆಡಿಎಸ್ ನಾಯಕರು ಅಸಮಾಧಾನಿತರ ಸಮಾಧಾನಕ್ಕೆ ಯತ್ನಿಸಿದ್ದಾರೆ. ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಇಂದು ಜೆಡಿಎಸ್ ಅಸಮಾಧಾನಿತರ ಸಭೆ ಕರೆದಿದ್ದಾರೆ.

ಬೆಳಿಗ್ಗೆ 11 ಗಂಟೆಗೆ ಬಿಡದಿಯ ತೋಟದ ಮನೆಯಲ್ಲಿ ಜೆಡಿಎಸ್ ಸಭೆ ಕರೆಯಲಾಗಿದ್ದು, ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ, ಶಾಸಕರು, ಮಾಜಿ ಶಾಸಕರು ಹಾಗೂ ಪರಾಜಿತ ಅಭ್ಯರ್ಥಿಗಳ ಜೊತೆ ಚರ್ಚಿಸಿ, ಎಲ್ಲರ ಮನವೊಲಿಕೆಗೆ ಪ್ರಯತ್ನಿಸಲಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular