HomeKarnatakaBIG NEWS: ಸರ್ಕಾರದ ವಿರುದ್ಧ ಬೃಹತ್ ಪ್ರತಿಭಟನೆ; ಕೊಬ್ಬರಿಗೆ ಬೆಂಬಲ ಬೆಲೆ ಆಗ್ರಹಿಸಿ ಪಾದಯಾತ್ರೆಗೆ ಮುಂದಾದ...

BIG NEWS: ಸರ್ಕಾರದ ವಿರುದ್ಧ ಬೃಹತ್ ಪ್ರತಿಭಟನೆ; ಕೊಬ್ಬರಿಗೆ ಬೆಂಬಲ ಬೆಲೆ ಆಗ್ರಹಿಸಿ ಪಾದಯಾತ್ರೆಗೆ ಮುಂದಾದ HDK

ಬೆಂಗಳೂರು: ಕೊಬ್ಬರಿಗೆ ಬೆಂಬಲ ಬೆಲೆಗೆ ಆಗ್ರಹಿಸಿ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಸರ್ಕಾರದ ವಿರುದ್ಧ ಬೃಹತ್ ಪ್ರತಿಭಟನೆಗೆ ಮುಂದಾಗಿದ್ದಾರೆ.

ಕೊಬ್ಬರಿ ಬೆಳೆಗಾರರು ಹಾಗೂ ರೈತರೊಂದಿಗೆ ಪಾದಯಾತ್ರೆಗೆ ಸಜ್ಜಾಗಿದ್ದು, ಜನವರಿ ಮೊದಲ ವಾರದಲ್ಲಿ ಹಾಸನದಿಂದ ತುಮಕೂರಿನವರೆಗೆ ಪಾದಯಾತ್ರೆ ನಡೆಸಲಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ನಾಲ್ಕು ತಾಲೂಕುಗಳ ಮೂಲಕ 120 ಕಿ.ಮೀ ಪಾದಯಾತ್ರೆ ನಡೆಸುವ ಮೂಲಕ ಸರ್ಕಾರದ ವಿರುದ್ಧ ಹೋರಾಟಕ್ಕೆ ಸಜ್ಜಾಗಿದ್ದಾರೆ. ಹಾಸನದ ಅರಸಿಕೆರೆ, ತಿಪಟೂರು, ತುರುವೆಕೆರೆ, ತುಮಕೂರಿನಲ್ಲಿ ಹತ್ತು ದಿನಗಳ ಕಾಲ ಪಾದಯಾತ್ರೆ ನಡೆಸಲಿದ್ದಾರೆ.

ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಎನ್ ಡಿಎ ಜೊತೆ ಮೈತ್ರಿ ಮಾಡಿಕೊಂಡಿರುವ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಈಗ ಕೊಬ್ಬರಿ ಬೆಂಬಲ ಬೆಲೆಗೆ ಆಗ್ರಹಿಸಿ ಪಾದಯಾತ್ರೆ ನಡೆಸುವ ಮೂಲಕ ಕಾಂಗ್ರೆಸ್ ವಿರುದ್ಧ ಹೋರಟಕ್ಕೆ ತಂತ್ರ ರೂಪಿಸಿದ್ದಾರೆ ಎನ್ನಲಾಗಿದೆ.

 

For Latest News Updates, Join Our Whatsapp Community🚩
RELATED ARTICLES

Most Popular