BIG NEWS: ಮಾಜಿ ಸಿಎಂ ಕುಮಾರಸ್ವಾಮಿ ವಿರುದ್ಧ ದೂರು ದಾಖಲು

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಭ್ರಷ್ಟಾಚಾರ ಆರೊಪ ಮಾಡಿ ಪೆನ್ ಡ್ರೈವ್ ಪ್ರದರ್ಶನ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ವಿರುದ್ಧ ದೂರು ದಾಖಲಾಗಿದೆ.

ಪೆನ್ ಡ್ರೈವ್ ಗೆ ಸಂಬಂಧಿಸಿದಂತೆ ವಕೀಲ ಅಮೃತೇಶ್ ಎಂಬುವವರು ಮಾಜಿ ಸಿಎಂ ಕುಮಾರಸ್ವಾಮಿ ವಿರುದ್ಧ ವಿಧಾನಸೌಧ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಪೆನ್ ಡ್ರೈವ್ ಪ್ರದರ್ಶನ ಮಾಡಿದ್ದ ವಿಚಾರಕ್ಕೆ ಸಂಬಂಧಿಸಿದಂತೆ ಕುಮಾರಸ್ವಾಮಿ ಅವರಿಗೆ ಲೀಗಲ್ ನೋಟಿಸ್ ನೀಡಲಾಗಿತ್ತು. ಆದರೆ ಈವರೆಗೂ ಉತ್ತರ ನೀಡಿಲ್ಲ. ಪೆನ್ ಡ್ರೈವ್ ನ್ನು ಸ್ಪೀಕರ್ ಅಥವಾ ಪೊಲೀಸರಿಗೂ ನೀಡಿಲ್ಲ. ಮಾಜಿ ಸಿಎಂ ಆಗಿದ್ದವರು ಈ ರೀತಿ ನಡೆದುಕೊಳ್ಳುತ್ತಿರುವುದು ಸರಿಯಲ್ಲ. ಈ ಹಿನ್ನೆಲೆಯಲ್ಲಿ ಹೆಚ್.ಡಿ.ಕೆ ವಿರುದ್ಧ ಬ್ಲ್ಯಾಕ್ ಮೇಲ್, ಬೆದರಿಕೆ, ಅಪರಾಧಿಕ ಸಂಚು ಹಾಗೂ ಎಕ್ಸ್ ಟಾರ್ಷನ್ ಆರೋಪದಡಿ ಕ್ರಮ ಕೈಗೊಳ್ಳುವಂತೆ ಅಮೃತೇಶ್ ದೂರು ನೀಡಿದ್ದಾರೆ.

 

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read