HomeLatest Newsಜೆಡಿಎಸ್ ಬಗ್ಗೆ ನೀವು ಸರ್ಟಿಫಿಕೇಟ್ ಕೊಡುವುದು ಬೇಡ; ನಾಡಿನ ಜನ ಕೊಡ್ತಾರೆ: ಸಚಿವ ಪ್ರಿಯಾಂಕ್ ಖರ್ಗೆ...

ಜೆಡಿಎಸ್ ಬಗ್ಗೆ ನೀವು ಸರ್ಟಿಫಿಕೇಟ್ ಕೊಡುವುದು ಬೇಡ; ನಾಡಿನ ಜನ ಕೊಡ್ತಾರೆ: ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ HDK ಆಕ್ರೋಶ

ಬೆಂಗಳೂರು: ಜೆಡಿಎಸ್ ಪಕ್ಷ ನಾಶವಾಗುತ್ತದೆ ಎಂದು ಹೇಳಿಕೆ ನೀಡಿದ್ದ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಕಿಡಿಕಾರಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಹೆಚ್.ಡಿ.ಕುಮಾರಸ್ವಾಮಿ, ಜೆಡಿಎಸ್ ಬಗ್ಗೆ ಪ್ರಿಯಾಂಕ್ ಖರ್ಗೆ ಸರ್ಟಿಫಿಕೇಟ್ ಕೊಡುವುದು ಬೇಡ. ಜೆಡಿಎಸ್ ಉಉಳಿಯುತ್ತೋ, ಬಿಡುತ್ತೋ ಎಂಬ ಬಗ್ಗೆ ನಾಡಿನ ಜನ ಸರ್ಟಿಫಿಕೇಟ್ ಕೊಡ್ತಾರೆ ಎಂದು ಗುಡುಗಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮೊದಲು ಲೀಸ್ ಬೇಸ್ ಸಿಎಂ ಬಗ್ಗೆ ಅವರು ಅವರಪ್ಪನನ್ನು ಕೇಳಲಿ. ಕಾಂಗ್ರೆಸ್ ಪಕ್ಷದಲ್ಲಿ ಇರುವ ಮಂತ್ರಿಗಳನ್ನು ಎಷ್ಟು ಜನರನ್ನು ಜೆಡಿಎಸ್ ನಿಂದ ಲೀಸ್ ಮೇಲೆ ಪಡೆದ್ರಿ. ಮುಖ್ಯಮಂತ್ರಿಗಳಿಂದ ಹಿಡಿದು ಎಷ್ಟು ಜನ ಮಂತ್ರಿಗಳನ್ನು ಲೀಸ್ ಬೇಸ್ ಮೇಲೆ ನಿಮ್ಮ ಪಕ್ಷಕ್ಕೆ ಕರೆದುಕೊಂಡಿದ್ದೀರಾ? ಎಂದು ಆಕ್ರೋಶ ವ್ಯಕ್ತಪಡಿಸಿದರು.

ನಿಮ್ಮ ಪಕ್ಷದಲ್ಲಿ ಒಂದು ಕಡೆ ಒಬ್ಬರ ಲೀಸ್ ಅವಧಿ ಮುಗಿದಿದೆ. ನನ್ನನ್ನು ಸಿಎಂ ಮಾಡಿ ಅಂತಿದ್ದಾರೆ ಒಬ್ಬರು. ಇನ್ನೊಬ್ಬರು ಲೀಸ್ ಅವಧಿ ಮುಗಿದಿಲ್ಲ. ನಾನೇ ಸಿಎಂ ಆಗಿ ಮುಂದುವರೆಯುತ್ತೇನೆ ಅಂತಾರೆ. ಮೊದಲು ನಿಮ್ಮ ಪಾರ್ಟಿ ಹಣೆಬರಹ ನೋಡಿಕೊಳ್ಳಿ. ಇಂದು ಮಹಾರಾಷ್ಟ್ರ ಚುನಾವಣೆ ಫಲಿತಾಂಶ ಏನಾಗಿದೆ ಎಂದು ಗೊತ್ತಿದೆ. ನಾಳೆ ಕರ್ನಾಟಕ ಚುನಾವಣಾ ಫಲಿತಾಂಶವೂ ಹೀಗೆ ಆಗಲಿದೆ. ಬಿಹಾರದಲ್ಲಿ ಏನಾಯ್ತು? 6 ಸೀಟು ತೆಗೆದುಕೊಂಡಿದ್ದೀರಾ. ಇಷ್ಟಾದರೂ ದುರಹಂಕಾರ ಬಿಡದಿದ್ದರೆ ಮುಂದೆ ನಿಮಗೂ ಇದೇ ಆಗುವುದು ಎಂದು ಕಿಡಿಕಾರಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular