HomeLatest NewsBIG NEWS: ವಸತಿ ಇಲಾಖೆಯಲ್ಲಿ ಹಣ ಕೊಟ್ಟವರಿಗೆ ಮನೆ ಆರೋಪ: ಇದೇನು ಕಾಂಗ್ರೆಸ್ ಸರ್ಕಾರಕ್ಕೆ ಹೊಸದೇನೂ...

BIG NEWS: ವಸತಿ ಇಲಾಖೆಯಲ್ಲಿ ಹಣ ಕೊಟ್ಟವರಿಗೆ ಮನೆ ಆರೋಪ: ಇದೇನು ಕಾಂಗ್ರೆಸ್ ಸರ್ಕಾರಕ್ಕೆ ಹೊಸದೇನೂ ಅಲ್ಲ: ಹೆಚ್.ಡಿ.ಕುಮಾರಸ್ವಾಮಿ ವಾಗ್ದಾಳಿ

ಬೆಂಗಳೂರು: ವಸತಿ ಇಲಖೆಲ್ಲಿ ಹಣ ಕೊಟ್ಟವರಿಗೆ ಮಾತ್ರ ಮನೆ. ಬಡವರಿಂದಲೂ ಹಣ ವಸೂಲಿ ಮಾಡಿ ಮನೆ ನೀಡಲಾಗಿದೆ ಎಂಬ ಸರ್ಕಾರದ ವಿರುದ್ಧ ಕಾಂಗ್ರೆಸ್ ಶಾಸಕ ಬಿ.ಆರ್.ಪಾಟೀಲ್ ಮಾಡಿರುವ ಆರೋಪ ರಾಜ್ಯ ರಾಜಕೀಯದಲ್ಲಿ ಭಾರಿ ಚರ್ಚೆಗೆ ಕಾರಣವಾಗಿದೆ.

ಈ ಬಗ್ಗೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಪ್ರತಿಕ್ರಿಯಿಸಿದ್ದು, ಇದು ಕಾಂಗ್ರೆಸ್ ಸರ್ಕಾರಕ್ಕೆ ಹೊಸದೇನೂ ಅಲ್ಲ. ಸರ್ಕಾರದ ಎಲ್ಲಾ ಇಲಾಖೆಯಲ್ಲಿಯೂ ಭ್ರಷ್ಟಾಚಾರ ನಡೆಯುತ್ತಿದೆ. ಯಾವ ಇಲಾಖೆಯಲ್ಲಿ ಹಣ ಇಲ್ಲದೇ ಮಾಡುತ್ತಿದ್ದಾರೆ? ಈ ಬಗ್ಗೆ ಈಗ ಸರ್ಕಾರದ ಶಾಸಕರುಗಳೇ ಅಸಮಾಧಾನ ಹೊರ ಹಾಕುತ್ತಿದ್ದಾರೆ ಎಂದು ಕಿಡಿಕಾರಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ವಸತಿ ಇಲಾಖೆಯಲ್ಲಿ ಹಣ ಕೊಟ್ಟವರಿಗೆ ಮನೆ ಎಂಬ ಮತನ್ನು ಇಂದು ನಾವು ಹೇಳುತ್ತಿಲ್ಲ. ಕಾಂಗ್ರೆಸ್ ಶಾಸಕರೇ ಆಗಿರುವ ಬಿ.ಆರ್.ಪಾಟೀಲ್ ಅವರು ಹೇಳುತ್ತಿದ್ದಾರೆ. ಬಿ.ಆರ್.ಪಾಟೀಲ್ ಅವರ ಆರೋಪ ಆಶ್ಚರ್ಯವೇನೂ ಅಲ್ಲ. ಎಲ್ಲಾ ಇಲಾಖೆಯಲ್ಲಿಯೂ ಪರ್ಸಂಟೇಜ್ ನಡೆಯುತ್ತಿದೆ. ಕಂದಾಯ ಸಚಿವ ಕೃಷ್ಣೇಬೈರೇಗೌಡರು ರೇಟ್ ಫಿಕ್ಸ್ ಮಾಡಿದ್ದೀರಿ ಅಂತಿದ್ದಾರೆ. ಆಯಾ ಇಲಾಖೆಯ ಮಂತ್ರಿಗಳಿಗೆ ಕೆಲಸ ಕೊಟ್ಟಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

For Latest News Updates, Join Our Whatsapp Community🚩
RELATED ARTICLES

Most Popular