HomeKarnatakaBIG NEWS: ಹೆಚ್ ಡಿಕೆ ಬಳಿ ಇರುವುದು ಪೆನ್ ಡ್ರೈವ್ ಅಲ್ಲ, ಪೆನ್ಸಿಲ್ ಡ್ರೈವ್; ಅಳಿಸಿ...

BIG NEWS: ಹೆಚ್ ಡಿಕೆ ಬಳಿ ಇರುವುದು ಪೆನ್ ಡ್ರೈವ್ ಅಲ್ಲ, ಪೆನ್ಸಿಲ್ ಡ್ರೈವ್; ಅಳಿಸಿ ಹೋಗಿದೆ; ಸಚಿವ ಚಲುವರಾಯಸ್ವಾಮಿ ವ್ಯಂಗ್ಯ

ಮಂಡ್ಯ: ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹಾಗೂ ಕಾಂಗ್ರೆಸ್ ನಾಯಕರ ನಡುವಿನ ವಾಕ್ಸಮರ ತಾರಕಕ್ಕೇರಿದೆ. ಕುಮಾರಸ್ವಾಮಿ ಪೆನ್ ಡ್ರೈವ್ ಪ್ರದರ್ಶನ ವಿಚಾರವಾಗಿ ಕೃಷಿ ಸಚಿವ ಚಲುವರಾಯಸ್ವಾಮಿ ಕಿಡಿ ಕಾರಿದ್ದಾರೆ.

ಮಂಡ್ಯದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಚಲುವರಾಯಸ್ವಾಮಿ, ಮಾಜಿ ಸಿಎಂ ಕುಮಾರಸ್ವಾಮಿ ಅವರಿಗೆ ಈ ರಾಜ್ಯದ ಜವಾಬ್ದಾರಿ ಹಾಗೂ ಜನ ಮುಖ್ಯವಲ್ಲ. ಅವರು ಯಾವತ್ತೂ ಜನರ ಸಮಸ್ಯೆ ಬಗ್ಗೆ ಮಾತನಾಡಲ್ಲ. ಬರಿ ರಾಜಕಾರಣ ಮಾಡುತ್ತಿದ್ದಾರೆ. ಕಳೆದ ಎರಡು ಮೂರು ತಿಂಗಳಿಂದ ಹಿಡಿತವಿಲ್ಲದಂತೆ ಮಾತನಾಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಅವರಿಗೆ ಯಾವ ಸಚಿವರು ಕರೆ ಮಾಡಿದ್ದಾರೆ ಎಂಬುದನ್ನು ದಾಖಲೆ ಬಿಡುಗಡೆ ಮಾಡಲಿ. ಅವರ ಬಳಿ ಇರುವ ಪೆನ್ ಡ್ರೈವ್ ಬಿಡುಗಡೆ ಮಾಡುವಂತೆ ಹೇಳಿದರೆ ಈಗ ಪೆನ್ ಡ್ರೈವ್ ಬಿಡುಗಡೆ ಮಾಡಬೇಡಿ ಎಂದು ಮಂತ್ರಿಯೊಬ್ಬರು ಕರೆ ಮಾಡಿ ಹೇಳಿದ್ದಾರೆ ಎನ್ನುತ್ತಾರೆ. ಅದ್ಯಾವ ಮಂತ್ರಿ ಅಂತಾ ಹೇಳಲಿ. ಅವರ ಬಳಿ ಇರುವುದು ಪೆನ್ ಡ್ರೈವ್ ಅಲ್ಲ, ಪೆನ್ಸಿಲ್ ಡ್ರೈವ್, ಇರೋದು ಅಳಿಸಿ ಹೋಗಿದೆ ಎಂದು ವ್ಯಂಗ್ಯವಾಡಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular