HomeKarnatakaBIG NEWS: ನಾನು ಹೇಳಿದ್ದು ವ್ಯಂಗ್ಯವಾಗಿ; ತಮ್ಮ ಹೇಳಿಕೆಗೆ ಸ್ಪಷ್ಟನೆ ನೀಡಿದ HDK

BIG NEWS: ನಾನು ಹೇಳಿದ್ದು ವ್ಯಂಗ್ಯವಾಗಿ; ತಮ್ಮ ಹೇಳಿಕೆಗೆ ಸ್ಪಷ್ಟನೆ ನೀಡಿದ HDK

ರಾಮನಗರ: ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗುವುದಾದರೆ ಜೆಡಿಎಸ್ ನ 19 ಶಾಸಕರ ಬೆಂಬಲ ನೀಡುವುದಾಗಿ ಘೋಷಿಸಿದ್ದ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಈಗ ತಮ್ಮ ಹೇಳಿಕೆಗೆ ಸ್ಪಷ್ಟನೆ ನೀಡಿದ್ದಾರೆ.

ರಾಮನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಹೆಚ್.ಡಿ.ಕುಮಾರಸ್ವಾಮಿ, ನಾಳೆಯೇ ಡಿ.ಕೆ.ಶಿವಕುಮಾರ್ ಸಿಎಂ ಆಗುವುದಾದರೆ ಜೆಡಿಎಸ್ ಶಾಸಕರ ಬೆಂಬಲವಿದೆ ಎಂದು ನಾನು ಹೇಳಿದ್ದು ವ್ಯಂಗ್ಯವಾಗಿ. ಪ್ರತಿ ದಿನ ನೀವು ಬನ್ನಿ, ನೀವು ಬನ್ನಿ ಅಂತಾ ಎಲ್ಲರನ್ನೂ ಕರೆಯುತ್ತಿದ್ದಾರೆ. ಮುಖ್ಯಮಂತ್ರಿಗಳು ಕನಿಷ್ಠ 50 ಜನರನ್ನಾದರೂ ಕರೆ ತನ್ನಿ ಎಂದು ಕರೆ ನೀಡಿದ್ದಾರೆ. ಇನ್ನೂ ಮುಂದೆ ಯಾಕೆ ಹೋಗ್ತೀರಾ? ಒಳ್ಳೆಯ ಕೆಲಸ ಮಾಡುತ್ತೇನೆ ಎಂದರೆ ಎಲ್ಲರನ್ನೂ ಕಳಿಸುತ್ತೇನೆ ಎಂದು ಹೇಳಿದ್ದೇನೆ ಎಂದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿ ಆಗ್ತಾರಾ ಇಲ್ಲವಾ ಎಂಬುದನ್ನು ಕಾಂಗ್ರೆಸ್ ನವರು ಹೇಳಬೇಕು. ಲೋಕಸಭಾ ಚುನಾವಣೆ ಬಳಿಕ ಈ ರಾಜ್ಯದಲ್ಲಿ ಮಾತ್ರವಲ್ಲ ಇಡೀ ದೇಶದಲ್ಲಿ ಕಾಂಗ್ರೆಸ್ ಇರುತ್ತಾ ಎಂಬುದನ್ನು ಯೋಚನೆ ಮಾಡಲಿ ಎಂದು ಹೇಳಿದರು.

For Latest News Updates, Join Our Whatsapp Community🚩
RELATED ARTICLES

Most Popular