BIG NEWS: ಮಚ್ಚು ಹಿಡಿದುಕೊಂಡು ಹೋಗುವ ವ್ಯಕ್ತಿಗೆ ಮಂತ್ರಿ ಸ್ಥಾನ ಕೊಟ್ಟಿದ್ದೀರಿ…ಇದಕ್ಕೇನಾ ನಿಮಗೆ ವೋಟ್ ಹಾಕಿರೋದು? ಸರ್ಕಾರದ ವಿರುದ್ಧ HDK ಆಕ್ರೋಶ

ಬೆಂಗಳೂರು: ಧಮ್ಕಿ ಹಾಕಿ ದೌರ್ಜನ್ಯ ಎಸಗಿಸಿದ ಆರೋಪ ಎದುರಿಸುತ್ತಿರುವ ಯೋಜನೆ ಹಾಗೂ ಸಾಂಖ್ಯಿಕ ಖಾತೆ ಸಚಿವ ಡಿ.ಸುಧಾಕರ್ ಅವರನ್ನು ಕೂಡಲೇ ಸಂಪುಟದಿಂದ ವಜಾ ಮಾಡಬೇಕು. ಸವರನ್ನು ಬಂಧಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಒತ್ತಾಯಿಸಿದ್ದಾರೆ.

ಬ್ರಾಹ್ಮಣರು ಹಾಗೂ ದಲಿತರನ್ನು ನಿಂದಿಸಿರುವ ಸಚಿವ ಡಿ.ಸುಧಾಕರ್ ಅವರ ವಿಡಿಯೋ ವೈರಲ್ ಆಗಿದ್ದು, ಸಚಿವರು ಕ್ಷಮೆಯಾಚಿಸಬೇಕು, ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂಬ ಆಗ್ರಹ ರಾಜ್ಯಾದ್ಯಂತ ಕೇಳಿಬರುತ್ತಿದೆ. ಇದೇ ವಿಚಾರವಾಗಿ ಬೆಂಗಳೂರಿನಲ್ಲಿ ಮಾತನಾಡಿದ ಮಾಜಿ ಸಿಎಂ ಕುಮಾರಸ್ವಾಮಿ, ದಬ್ಬಾಳಿಕೆ, ದೌರ್ಜನ್ಯ ನಡೆಸುವವರು ಮಂತ್ರಿಗಳಾಗಿದ್ದಾರೆ. ಮಚ್ಚು ಹಿಡಿದುಕೊಂಡು ಹೋಗುವ ವ್ಯಕ್ತಿಗೆ ಮಂತ್ರಿ ಸ್ಥಾನ ಕೊಟ್ಟಿದ್ದೀರಿ ಇದೇನಾ ಜನರನ್ನು ರಕ್ಷಣೆ ಮಾಡುವ ರೀತಿ? ಇಂಥ ವ್ಯಕ್ತಿಯನ್ನು ಸಂಪುಟದಲ್ಲಿ ಇರಿಸಿಕೊಳ್ಳಬಾರದು. ಕೂಡಲೇ ವಜಾ ಮಾಡಬೇಕು ಎಂದು ಆಗ್ರಹಿಸಿದರು.

ಸಿದ್ದರಾಮಯ್ಯನವರೇ ನೀವು ಬೇರೆ ಪಕ್ಷದವರಿಗೆ ಮಾನ ಮರ್ಯಾದೆ ಇದೆಯಾ ಅಂತ ಕೇಳ್ತಾ ಇರ್ತೀರಲ್ಲ, ಅಲ್ಲವೇ? ನಿಮಗೆ ಏನಿದೆ ಅಂತ ನಾನು ಕೇಳಲು ಬಯಸುತ್ತೇನೆ. ಎಫ್ ಐ ಆರ್ ದಾಖಲಿಸಿದ ಪೊಲೀಸ್ ಅಧಿಕಾರಿಗಳ ಮೇಲೆಯೇ ಒತ್ತಡ ಹೇರುವ ಕೆಲಸ ಮಾಡುತ್ತಿದ್ದಿರಿ. ನಿಮಗೆ ಆತ್ಮಸಾಕ್ಷಿ ಎನ್ನುವುದು ಇದೆಯಾ? ಎಂದು ಖಾರವಾಗಿ ಪ್ರಶ್ನಿಸಿದರು.

ಅಧಿಕಾರಿಗಳನ್ನು ಬಹಳ ಕೀಳಾಗಿ ನಡೆಸಿಕೊಳ್ಳುತ್ತಿದ್ದೀರಿ. ಎಫ್ ಐ ಆರ್ ದಾಖಲಿಸಿದ ಅಧಿಕಾರಿಯನ್ನು ದಾಖಲೆಗಳನ್ನು ತೆಗೆದುಕೊಂಡು ಮನೆಗೆ ಬಾ ಅಂತ ಬೆದರಿಕೆ ಹಾಕುತ್ತೀರಿ. ಹೆಣ್ಣು ಮಗಳ ಮೇಲೆ ಮಚ್ಚು, ಕೊಡಲಿ ಹಿಡಿದು ಬೆದರಿಸಲು ಹೊರಟಿದ್ದೀರಲ್ಲಾ? ಜನ ಇದಕ್ಕೇನಾ ನಿಮಗೆ ಮತ ಹಾಕಿದ್ದು? ಎಂದು ಆಕ್ರೋಶ ವ್ಯಕ್ತಪಡಿಸಿದರು.

ಮಚ್ಚು, ಕೊಡಲಿ, ಕತ್ತಿ ಹಿಡಿಯುವವರನ್ನು ಮಂತ್ರಿ ಮಾಡಿಕೊಂಡಿದ್ದೀರಲ್ಲಾ, ದಲಿತರ ಪರ ಕಾಳಜಿ ಇರುವ ವಿಧೇಯಕವನ್ನು ಬೇರೆ ಬೇರೆ ಸದನದಲ್ಲಿ ಪಾಸ್ ಮಾಡಿಕೊಂಡಿದ್ದೀರಲ್ಲ, ಕಸದ ಬುಟ್ಟಿಗೆ ಹಾಕಲಿಕ್ಕೆ ಆ ಬಿಲ್ ಅನ್ನು ಪಾಸ್ ಮಾಡಿಕೊಂಡಿದ್ದೀರಾ? ಎಂದು ಪ್ರಶ್ನಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read