HomeKarnatakaBIG NEWS: ನಾನೇನು ರಾಜ್ಯದ ಆಸ್ತಿ ಕಬಳಿಸಿಲ್ಲ; ಯಾವುದೇ ಕ್ರಮಕ್ಕೂ ನಾನು ಸಿದ್ಧನಿದ್ದೇನೆ ಎಂದ HDK

BIG NEWS: ನಾನೇನು ರಾಜ್ಯದ ಆಸ್ತಿ ಕಬಳಿಸಿಲ್ಲ; ಯಾವುದೇ ಕ್ರಮಕ್ಕೂ ನಾನು ಸಿದ್ಧನಿದ್ದೇನೆ ಎಂದ HDK

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ವಿದ್ಯುತ್ ಕಳ್ಳತನ ಮಾಡಿ ಕಂಬದಿಂದ ಅಕ್ರಮವಾಗಿ ವಿದ್ಯುತ್ ಸಂಪರ್ಕ ಪಡೆದು ತಮ್ಮ ಮನೆಯಲ್ಲಿ ವಿದ್ಯುತ್ ದೀಪಾಲಂಕಾರ ಮಾಡಿದ್ದಾರೆ ಎಂಬ ಕಾಂಗ್ರೆಸ್ ಆರೋಪಕ್ಕೆ ಹೆಚ್.ಡಿ.ಕುಮಾರಸ್ವಾಮಿ ಸ್ಪಷ್ಟನೆ ನೀಡಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಬರೆದುಕೊಂಡಿರುವ ಮಾಜಿ ಸಿಎಂ ಕುಮಾರಸ್ವಾಮಿ, ದೀಪಾವಳಿ ಹಬ್ಬಕ್ಕೆ ನನ್ನ ಮನೆಗೆ ವಿದ್ಯುತ್ ದೀಪಗಳ ಅಲಂಕಾರ ಮಾಡಲು ಖಾಸಗಿ ಡೆಕೋರೇಟರ್ ಒಬ್ಬರಿಗೆ ಹೇಳಲಾಗಿತ್ತು. ಅವರು ಮನೆಗೆ ವಿದ್ಯುತ್ ದೀಪಗಳ ಅಲಂಕಾರ ಮಾಡಿದ ಮೇಲೆ ಪಕ್ಕದಲ್ಲಿಯೇ ಇದ್ದ ಕಂಬದಿಂದ ವಿದ್ಯುತ್ ಸಂಪರ್ಕ ಪಡೆದು ಪರೀಕ್ಷೆ ಮಾಡಿದ್ದಾರೆ. ಆಗ ನಾನು ಬಿಡದಿಯ ತೋಟದಲ್ಲಿದ್ದೆ. ನಿನ್ನೆ ರಾತ್ರಿ ಮನೆಗೆ ವಾಪಸ್ ಬಂದಾಗ ಈ ವಿಷಯ ನನ್ನ ಗಮನಕ್ಕೆ ಬಂತು. ತಕ್ಷಣ ಅದನ್ನು ತೆಗೆಸಿ ಮನೆಯ ಮೀಟರ್ ಬೋರ್ಡ್ ನಿಂದಲೇ ವಿದ್ಯುತ್ ಸಂಪರ್ಕ ಕಲ್ಪಿಸುವಂತೆ ಮಾಡಿದ್ದೇನೆ. ಇದು ವಾಸ್ತವ ಸ್ಥಿತಿ. ಇದರಲ್ಲಿ ಮುಚ್ಚುಮರೆ ಏನೂ ಇಲ್ಲ ಎಂದು ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಈ ಅಚಾತುರ್ಯಕ್ಕೆ ನನ್ನ ವಿಷಾದವಿದೆ. ಬೆಸ್ಕಾಂ ಅಧಿಕಾರಿಗಳು ಬಂದು ಪರೀಕ್ಷೆ ಮಾಡಿ ನೋಟಿಸ್ ನೀಡಲಿ. ದಂಡ ಕಟ್ಟುತ್ತೇನೆ. ಇದನ್ನೇ ಕಾಂಗ್ರೆಸ್ ನವರು ದೊಡ್ಡದು ಮಾಡಿ ಪ್ರಚಾರ ಗಿಟ್ಟಿಸುವ ಕೆಲಸ ಮಾಡುತ್ತಿದ್ದಾರೆ. ಆ ಪಕ್ಷದ ಕ್ಷುಲ್ಲಕ ಮನಃಸ್ಥಿತಿಯ ಬಗ್ಗೆ ನನಗೆ ಮರುಕ ಇದೆ ಎಂದಿದ್ದಾರೆ.

ನಾನೇನು ರಾಜ್ಯದ ಆಸ್ತಿ ಕಬಳಿಸಿಲ್ಲ. ಕಂಡವರ ಭೂಮಿಗೆ ಬೇಲಿ ಹಾಕಿಲ್ಲ. ಇನ್ನೊಬ್ಬರ ರಕ್ತ ಕುಡಿದು ಧನದಾಹ ತೀರಿಸಿಕೊಂಡಿಲ್ಲ. ಕುಮಾರಸ್ವಾಮಿ ವಿದ್ಯುತ್ ಕಳ್ಳತನ ಮಾಡಿದ್ದಾರೆ, ಬೆಸ್ಕಾಂ ಕ್ರಮ ಕೈಗೊಳ್ಳಲಿ ಎಂದು ಉಪ ಮುಖ್ಯಮಂತ್ರಿಗಳು ಹೇಳಿದ್ದಾರೆ. ನಾನು ಮನೆಯಲ್ಲೇ ಇದ್ದೇನೆ. ಬೆಸ್ಕಾಂ ಅಧಿಕಾರಿಗಳು ಬರಲಿ. ಅವರ ಯಾವುದೇ ಕ್ರಮಕ್ಕೆ ನಾನು ಸಿದ್ಧನಿದ್ದೇನೆ ಎಂದು ಹೇಳಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular