BIG NEWS: ಹಣ ಲೂಟಿ ಹೊಡೆದ ಬಗ್ಗೆ ಸಿಎಂ ಸತ್ಯವನ್ನು ಬಹಿರಂಗಪಡಿಸಲಿ; HDK ಆಗ್ರಹ

ಮೈಸೂರು: ಬೆಂಗಳೂರಿನಲ್ಲಿ ನಡೆದ ಐಟಿ ದಾಳಿ ವೇಳೆ ಕೋಇ ಕೋಟಿ ಹಣ ಪತ್ತೆ ಪ್ರಕರಣ ವಿಪಕ್ಷಗಳಾದ ಬಿಜೆಪಿ-ಜೆಡಿಎಸ್ ಹಾಗೂ ಆಡಳಿತ ಪಕ್ಷ ಕಾಂಗ್ರೆಸ್ ನಡುವೆ ರಾಜಕೀಯ ಕೆಸರೆರಚಾಟಕ್ಕೆ ಕಾರಣವಾಗಿದೆ.

ಐಟಿ ದಾಳಿ ವೇಳೆ ಪತ್ತೆಯಾದ ಕೋಟ್ಯಂತರ ರೂಪಾಯಿ ಹಣದ ವಿಚಾರವಾಗಿ ಮೈಸೂರಿನ ನಂಜನಗೂಡಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹಣ ಲೂಟಿ ಹೊಡೆದ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸತ್ಯವನ್ನು ಬಹಿರಂಗಪಡಿಸಲಿ ಎಂದು ಹೇಳಿದ್ದಾರೆ.

ಸಿಎಂ ತಾವೊಬ್ಬರೇ ಸತ್ಯಹರಿಶ್ಚಂದ್ರರು ಅಂತಾರೆ, ಸತ್ಯ ಹೊರಗೆ ಬರಲಿ. ದೇವರ ಸನ್ನಿಧಿಯಲ್ಲಿ ನಿಂತು ಹೇಳುತ್ತಿದ್ದೇನೆ. ಕೋಟ್ಯಂತರ ರೂಪಾಯಿ ಹಣ ಪತ್ತೆಯಾಗಿದೆ. ಇದರಲ್ಲಿ ಯಾರ ಪಾತ್ರವಿದೆ? ಅಧಿಕಾರಿಗಳಿಂದ, ಕಾಂಟ್ರ್ಯಾಕ್ಟರ್ ರಿಂದ ಹಣ ವಸೂಲಿ ಮಾಡಿದ್ದಾರೆ. ಪ್ರತಿಯೊಂದಕ್ಕೂ ತನಿಖೆ ಅಂತಾರೆ, ಹಣ ಪತ್ತೆ ಬಗ್ಗೆ ಮೊದಲು ತನಿಖೆ ಮಾಡಿಸಲಿ ಎಂದು ಆಗ್ರಹಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read