ಬೆಂಗಳೂರು: ರಾಜ್ಯದಲ್ಲಿ ನಾಯಕತ್ವ ಬದಲಾವಣೆ ವಿಚಾರ ಚರ್ಚೆ ಬೆನ್ನಲ್ಲೇ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಸಿದ್ದರಾಮಯ್ಯನವರೇ ಮುಂದುವರೆಯುವ ನಿರೀಕ್ಷೆ ಇದೆ ಎಂದು ಭವಿಷ್ಯ ನುಡಿದಿದ್ದಾರೆ.
ಸೀಗೋಡು ಸುದ್ದಿಗಾರರೊಂದಿಗೆ ಮಾತನಾಡಿದ ಕೇಂದ್ರ ಸಚಿವ ಕುಮಾರಸ್ವಾಮಿ, ಸಿಎಂ ಸಿದ್ದರಾಮಯ್ಯನವರೇ ಬಜೆಟ್ ಮಂಡಿಸುತ್ತಾರೆ ಅನ್ನಿಸುತ್ತಿದೆ ಎಂದಿದ್ದಾರೆ. ಸಿಎಂ ಸಿದ್ದರಾಮಯ್ಯನವರು ಮುಂದಿನ 3 ಬಜೆಟ್ ನ್ನು ನಾನೇ ಮಂಡಿಸುತ್ತೇನೆ ಎಂದಿದ್ದಾರೆ. ಅವರೇ ಬಜೆಟ್ ಮಂಡಿಸಬಹುದು. ಇನ್ನು ಡಿ.ಕೆ.ಶಿವಕುಮಾರ್ ದೇವರ ಜೊತೆ ಮಾತನಾಡಿದ್ದಾರಂತೆ. 45 ದಿನಗಳಲ್ಲಿ ಅವರ ಆಸೆ ಈಡೇರಿಸುತ್ತಾರೆ ಅಂತಾ ಹೇಳಿದ್ದಾರೆ. 45 ದಿನಗಳಲ್ಲಿ ಏನಾಗುತ್ತೋ ನೋಡೋಣ ಎಂದರು.
ಸದ್ಯಕ್ಕಂತೂ ಸಿದ್ದರಾಮಯ್ಯನವರೇ ಸಿಎಂ ಆಗಿದ್ದಾರೆ. ಹಾಗಾಗಿ ಅವರೇ ಬಜೆಟ್ ಮಂಡಿಸುವುದು ನಿರೀಕ್ಷಿತ ಎಂದು ಹೇಳಿದ್ದಾರೆ.

