HomeKarnatakaಸಚಿವ ಸುಧಾಕರ್ ಅವರಿಗೆ ಏನಾಗಿದೆ? ಆಸ್ಪತ್ರೆಯಲ್ಲಿರುವ ಸಚಿವರ ಮಾಹಿತಿ ಏಕೆ ಮುಚ್ಚಿಡುತ್ತಿದ್ದೀರಿ? ರಾಜ್ಯದ ಜನತೆಗೆ ಉತ್ತರಿಸಿ:...

ಸಚಿವ ಸುಧಾಕರ್ ಅವರಿಗೆ ಏನಾಗಿದೆ? ಆಸ್ಪತ್ರೆಯಲ್ಲಿರುವ ಸಚಿವರ ಮಾಹಿತಿ ಏಕೆ ಮುಚ್ಚಿಡುತ್ತಿದ್ದೀರಿ? ರಾಜ್ಯದ ಜನತೆಗೆ ಉತ್ತರಿಸಿ: ಹೆಚ್.ಡಿ.ಕುಮಾರಸ್ವಾಮಿ ಆಗ್ರಹ

ಬೆಂಗಳೂರು: ದಾವಣಗೆರೆ ಉಪ ಚುನಾವಣೆಯಲ್ಲಿ ಏನೆಲ್ಲಾ ನಡೆಯಿತು ಎಂಬುದನ್ನು ನೋಡಿದ್ದೇವೆ. ಒಂದು ನಿರ್ದಿಷ್ಟ ಸಮುದಾಯವನ್ನು ಕಾಂಗ್ರೆಸ್ ಯಾವ ರೀತಿ ಅಪಮಾನಿಸಿ ಶಂಕಿಸಿ ನೋಡಿತು ಎಂಬುದನ್ನು ಕೂಡ ಕಂಡಿದ್ದೇವೆ. ವಾಸ್ತವ ಸ್ಥಿತಿ ಈಗಿರುವಾಗ ಯಾವ ಮುಖ ಇಟ್ಟುಕೊಂಡು ಕಾಂಗ್ರೆಸ್ ಪಕ್ಷವು ಹುಬ್ಬಳ್ಳಿಯಲ್ಲಿ ಅಹಿಂದ ಸಮಾವೇಶ ಮಾಡುತ್ತದೆ ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಪ್ರಶ್ನಿಸಿದ್ದಾರೆ.

ಕುರ್ಚಿ ಉಳಿಸಿಕೊಳ್ಳಲು ಅಹಿಂದ ಸಮಾವೇಶ ಮಾಡಲು ಹೊರಟಿದ್ದಾರೆ. ನಮ್ಮ ಭಿಕ್ಷೆಯಿಂದ ಕಾಂಗ್ರೆಸ್ ಗೆ ಅಧಿಕಾರ ಸಿಕ್ಕಿದೆ ಎಂದು ಅಹಿಂದ ವರ್ಗದ ಜನ ಹೇಳುತ್ತಿದ್ದಾರೆ. ಆಮೇಲೆ, ದಾವಣಗೆರೆಯಲ್ಲಿ ಅದೇ ಅಹಿಂದ ವರ್ಗವನ್ನು ಕಾಂಗ್ರೆಸ್ ಅಪಮಾನಕರವಾಗಿ ನಡೆಸಿಕೊಂಡಿದೆ. ದಿನವೂ ಮಾಧ್ಯಮಗಳಲ್ಲಿ ಅದುವೇ ಸುದ್ದಿ ಆಗುತ್ತಿದೆ. ಈ ಪರಿಸ್ಥಿಯಲ್ಲಿ ಅಹಿಂದ ಸಮಾವೇಶ ಮಾಡುತ್ತಿದ್ದಾರೆ. ದುಡ್ಡು ಖರ್ಚು ಮಾಡಿ ಜನ ಸೇರಿಸುತ್ತಾರೆ ಎಂದು ಕೇಂದ್ರ ಸಚಿವರು ಟೀಕಾಪ್ರಹಾರ ನಡೆಸಿದರು.

ಜಿಬಿಎ ಚುನಾವಣೆಗೆ ಹಣವಿಲ್ಲ, ಸಿಬ್ಬಂದಿತಯೂ ಇಲ್ಲ ಎಂದು ಚುನಾವಣೆ ಆಯೋಗ ಕೋರ್ಟ್ ಗೆ ತಿಳಿಸಿದೆ. ರಾಜ್ಯ ಸರ್ಕಾರವೇ ಚುನಾವಣೆ ಕಮಿಷನ್ ಮೂಲಕ ನ್ಯಾಯಾಲಯಕ್ಕೆ ತಿಳಿಸಿದೆ. ಕಾಂಗ್ರೆಸ್ ಸರ್ಕಾರ ಬೆನ್ನು ತೋರಿಸಿ ಓಡಿಹೋಗುತ್ತಿದೆ ಎಂದು ಕಿಡಿಕಾರಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇದೇ ವೇಳೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸಚಿವ ಸುಧಾಕರ್ ಅವರ ಆರೋಗ್ಯದ ಬಗ್ಗೆ ರಾಜ್ಯ ಸರ್ಕಾರ ಸರಿಯಾದ ಮಾಹಿತಿ ನೀಡಬೇಕು ಎಂದು ಹೆಚ್.ಡಿ.ಕುಮಾರಸ್ವಾಮಿ ಒತ್ತಾಯಿಸಿದರು.

ಸಚಿವ‌ ಸುಧಾಕರ್ ಸಾವು ಬದುಕಿನ ಹೋರಾಟ ಮಾಡುತ್ತಿದ್ದಾರೆ ಎಂದು ಇವರು ಹೇಳುತ್ತಿದ್ದಾರೆ. ಆದರೆ ಜನರೇ ಬೇರೆ ಮಾತನಾಡುತ್ತಿದ್ದಾರೆ. ಹಿರಿಯೂರು ಅಥವಾ ಬೇರೆ ಕ್ಷೇತ್ರದ ಬಗ್ಗೆ ಮಾತಾಡಲ್ಲ. ಆದರೆ, ಒಳಗೆ ಏನು ನಡೆಯುತ್ತಿದೆ ಎಂಬುದನ್ನು ನೋಡಬೇಕು. ಆ ವ್ಯಕ್ತಿ ಎಷ್ಟು ನೋವು ಅನುಭವಿಸುತ್ತಿದ್ದಾರೆ, ಯಾವ ಕಾರಣಕ್ಕೆ ಕೆಲ ವಿಷಯಗಳನ್ನು ಮುಚ್ಚಿಟ್ಟಿದ್ದಾರೆ? ಅವರಿಂದ ಹೆಬ್ಬೆಟ್ಟು ಒತ್ತಿಸಿಕೊಳ್ಳಲು ಎಲ್ಲಾ ವಿಷಯಗಳನ್ನು ಮುಚ್ಚಿಡಲಾಗಿದೆಯೇ? ಎಂಬುದರ ಬಗ್ಗೆ ರಾಜ್ಯ ಸರ್ಕಾರ ಹೇಳಬೇಕಾಗುತ್ತದೆ ಎಂದರು.

ನಾನು ಹಲವಾರು ಸಂದರ್ಭಗಳಲ್ಲಿ ನೋಡಿದ್ದೇನೆ. ಯಾವ ಕಾರಣಕ್ಕೆ ಎಲ್ಲವನ್ನು ಮುಚ್ಚಿಡುತ್ತಿದ್ದಾರೆ ಎಂಬುದನ್ನು ಜನತೆಗೆ ಹೇಳುವ ಜವಾಬ್ದಾರಿ ಸರ್ಕಾರದ್ದು. ಇಂಥ ವಿಚಾರಗಳಲ್ಲಿ ನಾನು ಚರ್ಚೆ ಮಾಡಲ್ಲ. ಆದರೆ, ಕೆಲ ವ್ಯಕ್ತಿಗಳು ಇಂಥ ಸಮಯ ದುರ್ಬಳಕೆ ಮಾಡಿಕೊಳ್ಳುವಲ್ಲಿ ಎಕ್ಸ್ ಪರ್ಟ್ ಗಳಿದ್ದಾರೆ ಎಂದು ಕುಮಾರಸ್ವಾಮಿ ಅವರು ಮಾರ್ಮಿಕವಾಗಿ ಹೇಳಿದರು.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular