HomeKarnatakaBIG NEWS: ರಾಜ್ಯ ಸರ್ಕಾರ 6ನೇ ಗ್ಯಾರಂಟಿಯಾಗಿ ಕತ್ತೆಲೆ ಭಾಗ್ಯ ಕೊಡಲು ಹೊರಟಿದೆ; ಸರ್ಕಾರದ ವಿರುದ್ಧ...

BIG NEWS: ರಾಜ್ಯ ಸರ್ಕಾರ 6ನೇ ಗ್ಯಾರಂಟಿಯಾಗಿ ಕತ್ತೆಲೆ ಭಾಗ್ಯ ಕೊಡಲು ಹೊರಟಿದೆ; ಸರ್ಕಾರದ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ

ಬೆಂಗಳೂರು: ರಾಜ್ಯದಲ್ಲಿ ನಡೆಯುತ್ತಿರುವ ಲೋಡ್ ಶೋಡ್ಡಿಂಗ್ ವಿಚಾರವಾಗಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿರುವ ಮಾಜಿ ಸಿಎಂ ಹೆಚ್.ಡಿ.ಕುಮರಸ್ವಾಮಿ, ಸರ್ಕಾರ 6ನೇ ಗ್ಯಾರಂಟಿಯಾಗಿ ಕತ್ತಲೆಭಾಗ್ಯ ಕೊಡಲು ಹೊರಟಿದೆ ಎಂದು ಕಿಡಿ ಕಾರಿದ್ದಾರೆ.

ಕಾಂಗ್ರೆಸ್ ಸರ್ಕಾರ ಈಗಾಗಲೇ 5 ಅರೆಬರೆ ಗ್ಯಾರಂಟಿಗಳನ್ನು ಕೊಟ್ಟು ಕೈ ತೊಳೆದುಕೊಂಡಿದೆ. ಶೀಘ್ರವೇ ಅರೆಬರೆ ಅಲ್ಲದ ಪೂರ್ಣಪ್ರಮಾಣದ 6ನೇ ಗ್ಯಾರಂಟಿ ಕೊಡಲು ಸನ್ನಾಹ ನಡೆಸಿದೆ. ಅದರ ಹೆಸರು ಕತ್ತಲೆಭಾಗ್ಯ ಎಂದು ಕುಮಾರಸ್ವಾಮಿ ಟಾಂಗ್ ನೀಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಡಿಸೆಂಬರ್ ತಿಂಗಳ ಹೊತ್ತಿಗೆ ಕರ್ನಾಟಕ ಈ ಕತ್ತಲೆ ಭಾಗ್ಯ ಕೂಪಕ್ಕೆ ಬೀಳುವುದು ಖಚಿತ. ಜನವರಿ ಅಂದರೆ 2024ರ ಹೊಸ ವರ್ಷಕ್ಕೆ ತಾನು ಕೊಟ್ಟ ಗೃಹಜ್ಯೋತಿಗೆ ಎಳ್ಳುನೀರು ಬಿಟ್ಟು ಕಗ್ಗತ್ತಲ ಕರ್ನಾಟಕ ಉದಯ ಮಾಡಿಸುವುದು ಗ್ಯಾರಂಟಿ. ಇದು ಸತ್ಯ ಎಂದು ಕುಮರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular