BREAKING NEWS: ಹೆಚ್.ಡಿ.ರೇವಣ್ಣಗೆ ಇನ್ನೂ ಮೂರು ದಿನ ಜೈಲುವಾಸವೇ ಗತಿ; ಜಾಮೀನು ಅರ್ಜಿ ಮುಂದೂಡಿಕೆ

ಬೆಂಗಳೂರು: ಮಹಿಳೆ ಕಿಡ್ನ್ಯಾಪ್ ಕೇಸ್ ನಲ್ಲಿ ಜೈಲುಪಾಲಾಗಿರುವ ಮಾಜಿ ಸಚಿವ ಹೆಚ್.ಡಿ.ರೇವಣ್ಣ ಅವರ ಜಾಮೀನು ಅರ್ಜಿ ವಿಚಾರಣೆ ಮತ್ತೆ ಮುಂದೂಡಲಾಗಿದೆ.

ಜಾಮೀನು ಕೋರಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಹೆಚ್,ಡಿ.ರೇವಣ್ಣ ಅರ್ಜಿ ಸಲ್ಲಿಸಿದ್ದರು. ಇಂದು ಬೆಳಿಗ್ಗೆ ಅರ್ಜಿ ವಿಚಾರಣೆ ಕೈಗೆತ್ತಿಕೊಂಡ ಕೋರ್ಟ್, ಮಧ್ಯಾಹ್ನ 2:45ಕ್ಕೆ ವಿಚಾರಣೆ ಮುಂದೂಡಿತ್ತು. ಮಧ್ಯಾಹ್ನ ರೇವಣ್ಣ ಪರ ವಕೀಲರ ವಾದ ಆಲಿಸಿದ ನ್ಯಾಯಾಲಯ ವಿಚಾರಣೆಯನ್ನು ಸೋಮವಾರಕ್ಕೆ ಮುಂದೂಡಿದೆ.

ಸೋಮವಾರ ಬೆಳಿಗ್ಗೆ 11:30ಕ್ಕೆ ಅರ್ಜಿ ವಿಚಾರಣೆ ಮುಂದೂಡಿ ಕೋರ್ಟ್ ಆದೇಶ ಹೊರಡಿಸಿದೆ. ಈ ಹಿನ್ನೆಲೆಯಲ್ಲಿ ಹೆಚ್.ಡಿ.ರೇವಣ್ಣಗೆ ಮತ್ತೆ ಮೂರು ದಿನ ಜೈಲುವಾಸವೇ ಗತಿಯಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read