HomeKarnatakaBREAKING NEWS: ಹೆಚ್.ಡಿ.ರೇವಣ್ಣಗೆ ಇನ್ನೂ ಮೂರು ದಿನ ಜೈಲುವಾಸವೇ ಗತಿ; ಜಾಮೀನು ಅರ್ಜಿ ಮುಂದೂಡಿಕೆ

BREAKING NEWS: ಹೆಚ್.ಡಿ.ರೇವಣ್ಣಗೆ ಇನ್ನೂ ಮೂರು ದಿನ ಜೈಲುವಾಸವೇ ಗತಿ; ಜಾಮೀನು ಅರ್ಜಿ ಮುಂದೂಡಿಕೆ

ಬೆಂಗಳೂರು: ಮಹಿಳೆ ಕಿಡ್ನ್ಯಾಪ್ ಕೇಸ್ ನಲ್ಲಿ ಜೈಲುಪಾಲಾಗಿರುವ ಮಾಜಿ ಸಚಿವ ಹೆಚ್.ಡಿ.ರೇವಣ್ಣ ಅವರ ಜಾಮೀನು ಅರ್ಜಿ ವಿಚಾರಣೆ ಮತ್ತೆ ಮುಂದೂಡಲಾಗಿದೆ.

ಜಾಮೀನು ಕೋರಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಹೆಚ್,ಡಿ.ರೇವಣ್ಣ ಅರ್ಜಿ ಸಲ್ಲಿಸಿದ್ದರು. ಇಂದು ಬೆಳಿಗ್ಗೆ ಅರ್ಜಿ ವಿಚಾರಣೆ ಕೈಗೆತ್ತಿಕೊಂಡ ಕೋರ್ಟ್, ಮಧ್ಯಾಹ್ನ 2:45ಕ್ಕೆ ವಿಚಾರಣೆ ಮುಂದೂಡಿತ್ತು. ಮಧ್ಯಾಹ್ನ ರೇವಣ್ಣ ಪರ ವಕೀಲರ ವಾದ ಆಲಿಸಿದ ನ್ಯಾಯಾಲಯ ವಿಚಾರಣೆಯನ್ನು ಸೋಮವಾರಕ್ಕೆ ಮುಂದೂಡಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸೋಮವಾರ ಬೆಳಿಗ್ಗೆ 11:30ಕ್ಕೆ ಅರ್ಜಿ ವಿಚಾರಣೆ ಮುಂದೂಡಿ ಕೋರ್ಟ್ ಆದೇಶ ಹೊರಡಿಸಿದೆ. ಈ ಹಿನ್ನೆಲೆಯಲ್ಲಿ ಹೆಚ್.ಡಿ.ರೇವಣ್ಣಗೆ ಮತ್ತೆ ಮೂರು ದಿನ ಜೈಲುವಾಸವೇ ಗತಿಯಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular