HomeKarnatakaBREAKING NEWS: ಹೆಚ್.ಡಿ.ರೇವಣ್ಣಗೆ ಮಧ್ಯಂತರ ಜಾಮೀನು ಮುಂದುವರಿಕೆ; ಜಾಮೀನು ಅರ್ಜಿ ಆದೇಶ ಕಾಯ್ದಿರಿಸಿದ ಕೋರ್ಟ್

BREAKING NEWS: ಹೆಚ್.ಡಿ.ರೇವಣ್ಣಗೆ ಮಧ್ಯಂತರ ಜಾಮೀನು ಮುಂದುವರಿಕೆ; ಜಾಮೀನು ಅರ್ಜಿ ಆದೇಶ ಕಾಯ್ದಿರಿಸಿದ ಕೋರ್ಟ್

ಬೆಂಗಳೂರು: ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣದಲ್ಲಿ ಜೆಡಿಎಸ್ ಶಾಸಕ ಹೆಚ್.ಡಿ.ರೇವಣ್ಣ ಮಧ್ಯಂತರ ಜಾಮೀನು ಮುಂದುವರೆಸಿ ಕೋರ್ಟ್ ಆದೇಶ ನೀಡಿದೆ.

ಹೊಳೆನರಸೀಪುರದಲ್ಲಿ ದಾಖಲಾಗಿದ್ದ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣದಲ್ಲಿ ಜಾಮೀನು ಕೋರಿ ಹೆಚ್.ಡಿ.ರೇವಣ್ಣ ಕೋರ್ಟ್ ಮೊರೆ ಹೋಗಿದ್ದರು. ಬೆಂಗಳೂರಿನ 42ನೇ ಎಸಿಎಂಎಂ ನ್ಯಾಯಾಲಯ ಅರ್ಜಿ ವಿಚಾರಣೆ ನಡೆಸಿ ನಿನ್ನೆ ಮೇ 16ರಂದು ಇಂದು ಮಧ್ಯಾಹ್ನದವರೆಗೂ ರೇವಣ್ಣಗೆ ಮಧ್ಯಂತರ ಜಾಮೀನು ಮಂಜೂರು ಮಾಡಿತ್ತು. ಇಂದು ಮತ್ತೆ ಜಾಮೀನು ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯ ಎಸ್ಐಟಿ ಪರ ವಕೀಲರ ಹಾಗೂ ರೇವಣ್ಣ ಪರ ವಕೀಲರ ವಾದ-ಪ್ರತಿವಾದ ಆಲಿಸಿದೆ.

ಈ ವೇಳೆ ಮೇ 20ಕ್ಕೆ ಜಾಮೀನು ಅರ್ಜಿ ಆದೇಶವನ್ನು ಕಾಯ್ದಿರಿಸಿದ ಕೋರ್ಟ್, ಸೋಮವಾರದವರೆಗೂ ರೇವಣ್ಣಗೆ ಮಧ್ಯಂತರ ಜಾಮೀನು ಮುಂದಿವರೆಯಲಿದೆ ಎಂದು ತಿಳಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular