HomeKarnatakaBREAKING NEWS: ಹೆಚ್.ಡಿ.ರೇವಣ್ಣ ಜಾಮೀನು ಅರ್ಜಿ ವಿಚಾರಣೆ ಮತ್ತೆ ಮುಂದೂಡಿಕೆ

BREAKING NEWS: ಹೆಚ್.ಡಿ.ರೇವಣ್ಣ ಜಾಮೀನು ಅರ್ಜಿ ವಿಚಾರಣೆ ಮತ್ತೆ ಮುಂದೂಡಿಕೆ

ಬೆಂಗಳೂರು: ಮಹಿಳೆ ಕಿಡ್ನ್ಯಾಪ್ ಕೇಸ್ ನಲ್ಲಿ ಜೈಲು ಸೇರಿರುವ ಮಾಜಿ ಸಚಿವ ಹೆಚ್.ಡಿ.ರೇವಣ್ಣ ಅವರ ಜಾಮೀನು ಅರ್ಜಿ ವಿಚಾರಣೆಯನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಮತ್ತೆ ಮುಂದೂಡಿದೆ.

ಮಹಿಳೆಯ ಕಿಡ್ನ್ಯಾಪ್ ಕೇಸ್ ನಲ್ಲಿ ಜೈಲುಪಾಲಾಗಿರುವ ಹೆಚ್.ಡಿ.ರೇವಣ್ಣ ಜಾಮೀನು ಕೋರಿ ಬೆಂಗಳೂರಿನ ವಿಶೇಷ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಇಂದು ಬೆಳಿಗ್ಗೆ ಅರ್ಜಿ ವಿಚಾರಣೆ ಕೈಗೆತ್ತಿಕೊಂಡ ಕೋರ್ಟ್ ಮಧ್ಯಾಹ್ನ 12:45 ಅರ್ಜಿ ವಿಚಾರಣೆ ಮುಂದೂಡಿತ್ತು. ಬಳಿಕ ನಡೆದ ವಿಚಾರಣೆಯಲ್ಲಿ ಹೆಚ್.ಡಿ.ರೇವಣ್ಣ ಹಾಗೂ ಎಸ್ ಐಟಿ ಪರ ಇಬ್ಬರು ವಕೀಲರ ವಾದ-ಪ್ರತಿವಾದ ಆಲಿಸಿದ ನ್ಯಾಯಾಲಯ ವಿಚಾರಣೆಯನ್ನು ಮಧ್ಯಾಹ್ನ 2:35ಕ್ಕೆ ಮುಂದೂಡಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕಳೆದ ಐದು ದಿನಗಳಿಂದ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಹೆಚ್.ಡಿ.ರೇವಣ್ಣಗೆ ಇಂದು ಜಾಮೀನು ಸಿಗಲಿದೆಯೇ? ಎಂಬುದು ಕೆಲವೇ ಹೊತ್ತಲ್ಲಿ ಪ್ರಕಟವಾಗಲಿದೆ.
.

For Latest News Updates, Join Our Whatsapp Community🚩
RELATED ARTICLES

Most Popular