HomeLatest NewsBREAKING: ಲೈಂಗಿಕ ದೌರ್ಜನ್ಯ ಪ್ರಕರಣ: ಹೆಚ್.ಡಿ.ರೇವಣ್ಣಗೆ ಬಿಗ್ ರಿಲೀಫ್

BREAKING: ಲೈಂಗಿಕ ದೌರ್ಜನ್ಯ ಪ್ರಕರಣ: ಹೆಚ್.ಡಿ.ರೇವಣ್ಣಗೆ ಬಿಗ್ ರಿಲೀಫ್

ಬೆಂಗಳೂರು: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಜೆಡಿಎಸ್ ಶಾಸಕ ಹೆಚ್.ಡಿ.ರೇವಣ್ಣಗೆ ಕೋರ್ಟ್ ಬಿಗ್ ರಿಲೀಫ್ ನೀಡಿದೆ. ಹೊಳೆನರಸಿಪುರ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಕೇಸ್ ನಲ್ಲಿ ರೇವಣ್ಣಗೆ ರಿಲೀಫ್ ಸಿಕ್ಕಿದೆ.

ವಿಳಂಬವಾಗಿ ಕೇಸ್ ದಾಖಲಿಸಿದ ಕಾರಣಕ್ಕೆ ಬೆಂಗಳೂರಿನ 42ನೇ ಎಸಿಜೆಎಂ ಕೋರ್ಟ್ ನ ನ್ಯಾಯಾಧೀಶ ಕೆ.ಎಂ.ಶಿವಕುಮಾರ್, ರೇವಣ್ಣ ವಿರುದ್ಧದ ಪ್ರಕರಣ ಕೈಬಿಟ್ಟು ಆದೇಶ ಹೊರಡಿಸಿದ್ದಾರೆ. ರೇವಣ್ಣ ವಿರುದ್ಧ ದಾಖಲಾಗಿದ್ದ 354A ಅಡಿಯ ಪ್ರಕರಣವನ್ನು ಕೋರ್ಟ್ ಕೈಬಿಟ್ಟಿದೆ.

ಹೊಳೆನರಸಿಪುರ ಮೂಲದ ಮಹಿಳೆ ಹೆಚ್.ಡಿ.ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣ ದಾಖಲಿಸಿದ್ದರು. ಇದೀಗ ಈ ಕೇಸ್ ನ್ನು ಕೈಬಿಡಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular