HomeKarnatakaBIG NEWS: ಮಾಜಿ ಸಚಿವ ಹೆಚ್.ಡಿ.ರೇವಣ್ಣ ಕುಟುಂಬದ ವಿರುದ್ಧ ಮತ್ತೊಂದು ಗಂಭೀರ ಆರೋಪ

BIG NEWS: ಮಾಜಿ ಸಚಿವ ಹೆಚ್.ಡಿ.ರೇವಣ್ಣ ಕುಟುಂಬದ ವಿರುದ್ಧ ಮತ್ತೊಂದು ಗಂಭೀರ ಆರೋಪ

ಹಾಸನ: ಮಾಜಿ ಸಚಿವ, ಶಾಸಕ ಹೆಚ್.ಡಿ.ರೇವಣ್ಣ ಕುಟುಂಬದ ವಿರುದ್ಧ ಜಮೀನು ಕಬಳಿಕೆ ಆರೋಪದ ಬೆನ್ನಲ್ಲೇ ಇದೀಗ ಮತ್ತೊಂದು ಗಂಭೀರ ಆರೋಪ ಕೇಳಿಬಂದಿದೆ. ಹೆಚ್.ಡಿ.ರೇವಣ್ಣ ಕುಟುಂಬದ ಅಕ್ರಮಗಳ ಬಗ್ಗೆ ದಾಖಲೆಗಳ ಸಮೇತ ಬಿಡುಗಡೆ ಮಡುವುದಾಗಿ ವಕೀಲ ದೇವರಾಜೇಗೌಡ ಹೇಳಿದ್ದಾರೆ.

ಹಾಸನದಲ್ಲಿ ಮಾತನಾಡಿದ ವಕೀಲ ದೇವರಾಜೇಗೌಡ, ಹೆಚ್.ಡಿ.ರೇವಣ್ಣ, ತಾಕತ್ತಿದ್ದರೆ ನನ್ನ ಎದುರುಗಡೆ ಬಾ. ಕೋರ್ಟ್ ನಿಂದ ಸ್ಟೇ ತಂದಿದ್ದೀರಾ. ಕೋರ್ಟ್ ತಡೆ ತೆರವಾದ ಬಳಿಕ ವಿಡಿಯೋ ಬಿಡುಗಡೆ ಮಾಡುತ್ತೇನೆ ಎಂದು ಏಕವಚನದಲ್ಲಿ ಗುಡುಗಿದ್ದಾರೆ.

ರೇವಣ್ಣ ನಿನ್ನ ಕುಟುಂಬದ ರಾಸಲೀಲೆಗೆ ಸಂಬಂಧಿಸಿದ ಎಲ್ಲಾ ದಾಖಲೆಗಳು ಇವೆ. ಅಕ್ರಮಗಳ ಬಗ್ಗೆ ಇರುವ ಎಲ್ಲಾ ದಾಖಲೆಗಳನ್ನು ತೆಗೆದುಕೊಂಡು ಬರುತ್ತೇನೆ. ಕೋರ್ಟ್ ತಡೆ ತೆರವಾದ ಬಳಿಕ ವಿಡಿಯೋ ಬಿಡುಗಡೆ ಮಾಡುತ್ತೇನೆ. ಗೌರವದಿಂದ ಬದುಕಿದರೆ ಸರಿ, ಇಲ್ಲದಿದ್ರೆ ಸರಿ ಇರಲ್ಲ ಎಂದು ಎಚ್ಚರಿಕೆ ನೀಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular