HomeKarnatakaಮುಂದುವರಿದ ರೇವಣ್ಣ ಟೆಂಪಲ್ ರನ್: ಧರ್ಮಸ್ಥಳಕ್ಕೆ ಭೇಟಿ ನೀಡಿದ ಹೆಚ್.ಡಿ.ರೇವಣ್ಣ; ಮಂಜುನಾಥ ಸ್ವಾಮಿಗೆ ವಿಶೇಷ ಪೂಜೆ

ಮುಂದುವರಿದ ರೇವಣ್ಣ ಟೆಂಪಲ್ ರನ್: ಧರ್ಮಸ್ಥಳಕ್ಕೆ ಭೇಟಿ ನೀಡಿದ ಹೆಚ್.ಡಿ.ರೇವಣ್ಣ; ಮಂಜುನಾಥ ಸ್ವಾಮಿಗೆ ವಿಶೇಷ ಪೂಜೆ

ಮಂಗಳೂರು: ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣ ಹಾಗೂ ಮಹಿಳೆ ಕಿಡ್ನ್ಯಾಪ್ ಕೇಸ್ ನಲ್ಲಿ ಜಾಮೀನು ಪಡೆದು ಬಿಡುಗಡೆಯಾಗಿರುವ ಮಾಜಿ ಸಚಿವ, ಜೆಡಿಎಸ್ ಶಾಸಕ ಹೆಚ್.ಡಿ.ರೇವಣ್ಣ ರಾಜ್ಯದ ಹಲವು ದೇವಾಲಯಗಳಿಗೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸುತ್ತಿದ್ದಾರೆ.

ಇದೀಗ ಹೆಚ್.ಡಿ.ರೇವಣ್ಣ ಧರ್ಮಸ್ಥಳಕ್ಕೆ ಭೇಟಿ ನೀಡಿ ಮಂಜುನಾಥ್ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿರುವ ಹೆಚ್.ಡಿ.ರೇವಣ್ಣ ಮಂಜುನಾಥ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿದರು. ಈ ವೇಳೆ 25,000 ರೂಪಾಯಿ ಕಾಣಿಕೆ ನೀಡಿ, ಸಂಕಷ್ಟ ಪರಿಹಾರಕ್ಕಾಗಿ ಪ್ರಾರ್ಥಿಸಿದರು.

ಇದೇ ವೇಳೆ ಅಮ್ಮನವರ ದೇವರ ಮುಂದೆ ಕೆಲ ಕಾಲ ಧ್ಯಾನ ಮಾಡಿದ ರೇವಣ್ಣ, ಧರ್ಮಸ್ಥಳದಲ್ಲಿ ಎಲ್ಲಾ ದೇವಾಲಯಗಳಿಗೂ ಭೇಟಿ ನೀಡಿ ಪೂಜೆ ಸಲ್ಲಿಸಿದರು. ಬಳಿಕ ಧರ್ಮಸ್ಥಳ ಧರ್ಮಾಧಿಕಾರಿ ವಿರೇಂದ್ರ ಹೆಗ್ಗಡೆ ಅವರನ್ನು ಭೇಟಿಯಾಗಿ ಆಶಿರ್ವಾದ ಪಡೆದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular