HomeKarnatakaBIG NEWS: ಹೆಚ್.ಡಿ.ರೇವಣ್ಣ ವಿರುದ್ಧ ಮತ್ತೊಂದು ಕೇಸ್; ವಿಡಿಯೋದಲ್ಲಿದ್ದ ಮಹಿಳೆ ನಾಪತ್ತೆ; ರೇವಣ್ಣ ವಿರುದ್ಧ ಎಫ್...

BIG NEWS: ಹೆಚ್.ಡಿ.ರೇವಣ್ಣ ವಿರುದ್ಧ ಮತ್ತೊಂದು ಕೇಸ್; ವಿಡಿಯೋದಲ್ಲಿದ್ದ ಮಹಿಳೆ ನಾಪತ್ತೆ; ರೇವಣ್ಣ ವಿರುದ್ಧ ಎಫ್ ಐ ಆರ್ ದಾಖಲು

ಮೈಸೂರು: ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣದ ಪ್ರಮುಖ ಆರೋಪಿಯಾಗಿರುವ ಶಾಸಕ ಹೆಚ್.ಡಿ.ರೇವಣ್ಣ ವಿರುದ್ಧ ಮತ್ತೊಂದು ಕೇಸ್ ದಾಖಲಾಗಿದೆ. ವಿಡಿಯೋದಲ್ಲಿದ್ದ ಸಂತ್ರಸ್ತ ಮಹಿಳೆ ನಾಪತ್ತೆಯಾಗಿರುವ ಹಿನ್ನೆಲೆಯಲ್ಲಿ ಎಫ್ ಐ ಆರ್ ದಾಖಲಿಸಲಾಗಿದೆ.

ಈ ಬಗ್ಗೆ ಸಂತ್ರಸ್ತೆ ಮಹಿಳೆಯ ಮಗ ಮೈಸೂರಿನ ಕೆ.ಆರ್.ನಗರ ಠಾಣೆಯಲ್ಲಿ ದೂರು ನೀಡಿದ್ದಾರೆ. ನನ್ನ ತಾಯಿ ಕಾಣೆಯಾಗಿದ್ದಾರೆ. ಹೆಚ್.ಡಿ.ರೇವಣ್ಣ ಹಾಗೂ ಸತೀಶ್ ಬಾಬು ತನ್ನ ತಾಯಿಯನ್ನು ಅಡಗಿಸಿಟ್ಟಿದ್ದಾರೆ ಎಂದು ಆರೋಪಿಸಿ ದೂರು ನೀಡಿದ್ದಾರೆ.

ಮಗ ನೀಡಿರುವ ದೂರಿನ ಹಿನ್ನೆಲೆಯಲ್ಲಿ ಪೊಲೀಸರು ಹೆಚ್.ಡಿ.ರೇವಣ್ಣ ಹಾಗೂ ಸತೀಶ್ ಬಾಬು ವಿರುದ್ಧ ಎಫ್ ಐ ಆರ್ ದಾಖಲಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
RELATED ARTICLES

Most Popular