HomeKarnatakaಹೆಚ್.ಡಿ.ರೇವಣ್ಣಗೆ ಮತ್ತೆ ಸಂಕಷ್ಟ; ಹೈಕೋರ್ಟ್ ನೋಟಿಸ್ ಜಾರಿ

ಹೆಚ್.ಡಿ.ರೇವಣ್ಣಗೆ ಮತ್ತೆ ಸಂಕಷ್ಟ; ಹೈಕೋರ್ಟ್ ನೋಟಿಸ್ ಜಾರಿ

ಹಾಸನ: ಮಹಿಳೆ ಕಿಡ್ನ್ಯಾಪ್ ಕೇಸ್ ನಲ್ಲಿ ಜಾಮೀನಿನ ಮೇಲೆ ಬಿಡುಗಡೆಯಾಗಿರುವ ಜೆಡಿಎಸ್ ಶಾಸಕ ಹೆಚ್.ಡಿ.ರೇವಣ್ಣಗೆ ಮತ್ತೆ ಸಂಕಷ್ಟ ಎದುರಾಗಿದೆ.

ಹೆಚ್.ಡಿ.ರೇವಣ್ಣಗೆ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ. ಹೊಳೆನರಸೀಪುರ ಪೊಲೀಸ್ ಠಾಣೆ ಪಿಎಸ್ಐ ಅಜಯ್, ಹರದನಹಳ್ಳಿ ಮನೆಯಲ್ಲಿ ರೇವಣ್ಣಗೆ ಹೈಕೋರ್ಟ್ ನೋಟಿಸ್ ತಲುಪಿಸಿದ್ದು, ನೋಟಿಸ್ ಸಿಕ್ಕ 5 ದಿನಗಳಲ್ಲಿ ಕೋರ್ಟ್ ಗೆ ಹಾಜರಾಗುವಂತೆ ಸೂಚಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಹೆಚ್.ಡಿ.ರೇವಣ್ಣಗೆ ಜಾಮೀನು ನೀಡಿದ್ದ ಕ್ರಮ ಪ್ರಶ್ನಿಸಿ ಎಸ್ಐಟಿ ಹೈಕೋರ್ಟ್ ನಲ್ಲಿ ಮೇಲ್ಮನವಿ ಅರ್ಜಿ ಸಲ್ಲಿಸಿದ್ದು, ಈ ಹಿನ್ನೆಲೆಯಲ್ಲಿ ರೇವಣ್ಣಗೆ ಈಗ ನೋಟಿಸ್ ಜಾರಿಯಾಗಿದೆ ಎಂದು ತಿಳಿದುಬಂದಿದೆ.

 

For Latest News Updates, Join Our Whatsapp Community🚩
RELATED ARTICLES

Most Popular