HomeKarnatakaBIG NEWS: ಸೂರಜ್ ವಿರುದ್ಧ ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣ: ಹೆಚ್.ಡಿ.ರೇವಣ್ಣ ಮೊದಲ ಪ್ರತಿಕ್ರಿಯೆ

BIG NEWS: ಸೂರಜ್ ವಿರುದ್ಧ ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣ: ಹೆಚ್.ಡಿ.ರೇವಣ್ಣ ಮೊದಲ ಪ್ರತಿಕ್ರಿಯೆ

ಬೆಂಗಳೂರು: ಸೂರಜ್ ರೇವಣ್ಣ ವಿರುದ್ಧ ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನ ವಿಚಾರವಾಗಿ ಶಾಸಕ ಹೆಚ್.ಡಿ.ರೇವಣ್ಣ ಮೊದಲ ಪ್ರತಿಕ್ರಿಯೆ ನೀಡಿದ್ದು, ನಮ್ಮ ಕುಟುಂಬದ ವಿರುದ್ಧ ವ್ಯವಸ್ಥಿತ ಷಡ್ಯಂತ್ರ ನಡೆದಿದೆ ಎಂದಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮತನಾಡಿದ ರೇವಣ್ಣ, ನಮ್ಮ ಕುಟುಂಬದ ವಿರುದ್ಧ ಷಡ್ಯಂತ್ರ ನಡೆದಿದೆ. ಷಡ್ಯಂತ್ರ ಮಾಡುತ್ತಿರುವವರು ಯಾರೆಂದು ಗೊತ್ತಾಗಲಿದೆ. ಈ ರೀತಿಯ ಯಾವ ಷಡ್ಯಂತ್ರಕ್ಕೂ ನಾನು ಹೆದರುವುದಿಲ್ಲ ಎಂದು ಹೇಳಿದರು.

ದೇವರು ಹಾಗೂ ನ್ಯಾಯಾಂಗ ವ್ಯವಸ್ಥೆ ಮೇಲೆ ನನಗೆ ನಂಬಿಕೆ ಇದೆ. ಯಾವ ಷಡ್ಯಂತ್ರದಿಂದಲೂ ಏನೂ ಆಗಲ್ಲ ಎಂದು ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇದೇ ವೇಳೆ ಹೆಚ್.ಡಿ.ರೇವಣ್ಣ ಬೆಂಗಳೂರಿನ ಬಸವನಗುಡಿ ಬಳಿಯ ಕಾರಂಜಿ ಆಂಜನೇಯ ದೇವಸ್ಥಾನಕ್ಕೆ ತೆರಳಿ ದೇವರ ದರ್ಶನ ಪಡೆದರು. ಬಳಿಕ ದೇವಾಲಯದಿಂದ ನೇರವಾಗಿ ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡರ ನಿವಾಸಕ್ಕೆ ತೆರಳಿದ್ದಾರೆ.

 

For Latest News Updates, Join Our Whatsapp Community🚩
RELATED ARTICLES

Most Popular