HomeKarnatakaBREAKING: ಜೆಡಿಎಸ್ ಕಾರ್ಯಕರ್ತರ ಮೇಲೆ ಲಾಠಿ ಚಾರ್ಜ್

BREAKING: ಜೆಡಿಎಸ್ ಕಾರ್ಯಕರ್ತರ ಮೇಲೆ ಲಾಠಿ ಚಾರ್ಜ್

ಬೆಂಗಳೂರು: ಮಾಜಿ ಸಚಿವ, ಜೆಡಿಎಸ್ ಶಾಸಕ ಹೆಚ್.ಡಿ.ರೇವಣ್ಣ ಜೈಲಿನಿಂದ ಬಿಡುಗಡೆಯಾಗುತ್ತಿದ್ದಂತೆ ಜೈಲಿನ ಮುಂಭಾಗದಲ್ಲಿ ಜಮಾವಣೆಗೊಂಡಿದ್ದ ಜೆಡಿಎಸ್ ಕಾರ್ಯಕರ್ತರನ್ನು ನಿಯಂತ್ರಿಸಲು ಪೊಲೀಸರು ಲಾಠಿ ಚಾರ್ಜ್ ಮಾಡಿದ ಘಟನೆ ನಡೆದಿದೆ.

ಮಹಿಳೆ ಕಿಡ್ನ್ಯಾಪ್ ಕೇಸ್ ನಲ್ಲಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹೆಚ್.ಡಿರೇವಣ್ಣಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. ಈ ಹಿನ್ನೆಲೆಯಲ್ಲಿ ಹೆಚ್.ಡಿ.ರೇವಣ್ಣ ಪರಪ್ಪನ ಅಗ್ರಹಾರ ಜೈಲಿನಿಂದ ಬಿಡಿಗಡೆಯಾಗಿದ್ದಾರೆ. ರೇವಣ್ಣ ಬಿಡುಗಡೆಯಾಗಿ ಹೊರಬರುತ್ತಿದ್ದಂತೆ ಜೈಲು ಬಳಿ ಜೆಡಿಎಸ್ ಕಾರ್ಯಕರ್ತರು ಜಮಾವಣೆಗೊಂಡಿದ್ದು, ಸಂಭ್ರಮಾಚರಣೆಗೆ ಸಜ್ಜಾಗಿದ್ದಾರೆ.

ಸ್ಥಳದಲ್ಲಿ ಜಮಾವಣೆಗೊಂಡಿರುವ ಕಾರ್ಯಕರ್ತರನ್ನು ನಿಯಂತ್ರಿಸಲು ಪೊಲೀಸರು ಹರಸಾಹಸಪಟ್ಟಿದ್ದಾರೆ. ಈ ವೇಳೆ ಪೊಲೀಸರು ಲಾಠಿಚಾರ್ಜ್ ನಡೆಸಿ ಜೆಡಿಎಸ್ ಕಾರ್ಯಕರ್ತರನ್ನು ಚದುರಿಸಿದ ಘಟನೆ ನಡೆದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
RELATED ARTICLES

Most Popular