HomeKarnatakaBIG NEWS: ಹೆಚ್.ಡಿ.ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣ; ಜಾಮೀನು ಅರ್ಜಿ ವಿಚಾರಣೆ ಆರಂಭ; ಖುದ್ದು...

BIG NEWS: ಹೆಚ್.ಡಿ.ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣ; ಜಾಮೀನು ಅರ್ಜಿ ವಿಚಾರಣೆ ಆರಂಭ; ಖುದ್ದು ಹಾಜರಾತಿಗೆ ಕೋರ್ಟ್ ಸೂಚನೆ

ಬೆಂಗಳೂರು: ಜೆಡಿಎಸ್ ಶಾಸಕ ಹೆಚ್.ಡಿ.ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ರೇವಣ್ಣ ಸಲ್ಲಿಸಿದ್ದ ಜಾಮೀನು ಅರ್ಜಿ ವಿಚಾರಣೆ ಆರಂಭವಾಗಿದೆ.

ಬೆಂಗಳೂರಿನ 42ನೇ ಎಸಿಎಂಎಂ ನ್ಯಾಯಾಲಯದಲ್ಲಿ ಅರ್ಜಿ ವಿಚಾರಣೆ ಆರಂಭವಾಗಿದೆ. ಇದೇ ಪ್ರಕರಣದಲ್ಲಿ ರೇವಣ್ಣ ವಿರುದ್ಧ ಸೆಕ್ಷನ್ 376 ಅಡಿ ಎಫ್ ಐ ಆರ್ ದಾಖಲಾಗಿದೆ. ಹಾಗಾಗಿ ಕೇಸ್ ವಿಚಾರಣೆಗೆ ನಮ್ಮ ಆಕ್ಷೇಪಣೆ ಇದೆ ಎಂದು ಎಸ್ ಪಿಪಿ ವಾದ ಮಂಡಿಸಿದ್ದಾರೆ.

ಅಲ್ಲದೇ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ರೇವಣ್ಣ ಅವರಿಗೆ 2 ಬಾರಿ ನೋಟಿಸ್ ನೀಡಲಾಗಿದೆ. ಆದಾಗ್ಯೂ ವಿಚಾರಣೆಗೆ ಹಾಜರಾಗಿಲ್ಲ. ಹಾಗಾಗಿ ರೇವಣ್ಣ ಅವರನ್ನು ಎಸ್ಐಟಿ ಕಸ್ಟಡಿಗೆ ನೀಡುವಂತೆ ಎಸ್ಐಟಿ ಪರ ವಕೀಲೆ ಜಾಯ್ನಾ ಕೊಠಾರಿ ಮನವಿ ಮಾಡಿದ್ದಾರೆ. ಈ ವೇಳೆ ರೇವಣ್ಣ ಖುದ್ದು ಹಾಜರಾಗುವಂತೆ ಕೋರ್ಟ್ ಸೂಚನೆ ನೀಡಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್.ಡಿ.ರೇವಣ್ಣಗೆ ಜಾಮೀನು ಸಿಗಲಿದೆಯೇ? ಕಾದುನೋಡಬೇಕಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular