HomeKarnatakaBIG NEWS: ಜೈಲಿನಿಂದ ರಿಲೀಸ್ ಆಗುತ್ತಿದ್ದಂತೆ ಟೆಂಪಲ್ ರನ್: ದೇವರ ಮೊರೆಹೋದ ಹೆಚ್.ಡಿ.ರೇವಣ್ಣ

BIG NEWS: ಜೈಲಿನಿಂದ ರಿಲೀಸ್ ಆಗುತ್ತಿದ್ದಂತೆ ಟೆಂಪಲ್ ರನ್: ದೇವರ ಮೊರೆಹೋದ ಹೆಚ್.ಡಿ.ರೇವಣ್ಣ

ಬೆಂಗಳೂರು: ಮಹಿಳೆ ಕಿಡ್ನ್ಯಾಪ್ ಕೇಸ್ ನಲ್ಲಿ ಜಾಮೀನಿನ ಮೇಲೆ ಬಿಡುಗಡೆಯಾಗಿರುವ ಮಾಜಿ ಸಚಿವ, ಜೆಡಿಎಸ್ ಶಾಸಕ ಹೆಚ್.ಡಿ.ರೇವಣ್ಣ ದೇವರ ಮೊರೆಹೋಗಿದ್ದಾರೆ.

ಪರಪ್ಪನ ಅಗ್ರಹಾರ ಜೈನಿಂದ ಬಿಡುಗಡೆಯಾಗುತ್ತಿದ್ದಂತೆ ಮಾಜಿ ಪ್ರಧಾನಿ, ತಂದೆ ಹೆಚ್.ಡಿ.ದೇವೇಗೌಡರ ನಿವಾಸಕ್ಕೆ ಆಗಮಿಸಿ ತಂದೆ-ತಾಯಿ ಆಶಿರ್ವಾದ ಪಡೆದ ರೇವಣ್ಣ, ಕೆಲ ಕಾಲ ದೇವೇಗೌಡರ ಜೊತೆ, ಮಾಜಿ ಸಿಎಂ ಕುಮಾರಸ್ವಾಮಿ ಜೊತೆ ಸಮಾಲೋಚನೆ ನಡೆಸಿದರು.

ಬಳಿಕ ಪದ್ಮನಾಭನಗರ ನಿವಾಸದಿಂದ ಜೆ.ಪಿ.ನಗರದ ಲಕ್ಷ್ಮೀ ಹೆಂಕಟೇಶ್ವರ ದೇವಾಲಯಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದ್ದಾರೆ. ಹೆಚ್.ಡಿ.ರೇವಣ್ಣ ನಾಳೆ ಹಾಸನದ ಹೊಳೆನರಸೀಪುರದಲ್ಲಿರುವ ದೇವಾಲಯಗಳಿಗೂ ಭೇಟಿ ನೀಡುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ದೈವೀಭಕ್ತರಾಗಿರುವ ಹೆಚ್.ಡಿ.ರೇವಣ್ಣ ಜೈಲಿನಿಂದ ಬಿಡಿಗಡೆಯಾಗುತ್ತಿದ್ದಂತೆ ವಿವಿಧ ದೇವಾಲಯಗಳಿಗೆ ತೆರಳುತ್ತಿದ್ದು, ಟೆಂಪಲ್ ರನ್ ಆರಂಭಿಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular