HomeKarnatakaBIG NEWS: ನನ್ನ ಮಗ ತಪ್ಪು ಮಾಡಿದ್ದರೆ ಗಲ್ಲಿಗೆ ಹಾಕಲಿ ಎಂದ ಶಾಸಕ ಹೆಚ್.ಡಿ.ರೇವಣ್ಣ

BIG NEWS: ನನ್ನ ಮಗ ತಪ್ಪು ಮಾಡಿದ್ದರೆ ಗಲ್ಲಿಗೆ ಹಾಕಲಿ ಎಂದ ಶಾಸಕ ಹೆಚ್.ಡಿ.ರೇವಣ್ಣ

ಬೆಂಗಳೂರು: ವಿಧಾನಮಂಡಲದ ಮುಂಗಾರು ಅಧಿವೇಶನದ ಎರಡನೇ ದಿನವಾದ ಇಂದು ವಿಧಾನಸಭೆಯಲ್ಲಿ ಮಾತನಾಡಿದ ಶಾಸಕ ಹೆಚ್.ಡಿ.ರೇವಣ್ಣ, ನನ್ನ ಮಗ ತಪ್ಪು ಮಾಡಿದ್ದರೆ ಆತನನ್ನು ಗಲ್ಲಿಗೇರಿಸಲಿ ಎಂದು ಗದ್ಗದಿತರಾದ ಪ್ರಸಂಗ ನಡೆದಿದೆ.

ವಿಧಾನಸಭೆಯಲ್ಲಿ ಮಾತನಾಡಿದ ಶಾಸಕ ರೇವಣ್ಣ, ನನ್ನ ಮಗ ತಪ್ಪು ಮಾಡಿಲ್ಲ. ಆತ ತಪ್ಪು ಮಡಿದ್ದರೆ ಗಲ್ಲಿಗೆ ಹಾಕಲಿ ನಾನು ಬೇಡ ಅನ್ನಲ್ಲ. ಆತನನ್ನು ವಹಿಸಿಕೊಳ್ಳಲು ಇಲ್ಲಿಗೆ ಬಂದಿಲ್ಲ ಎಂದು ಹೇಳಿದರು.

ಇನ್ನು ನನ್ನ ಬಗ್ಗೆ ಆರೋಪ ಮಾಡಲಾಗಿದೆ. ಹೆಣ್ಣು ಮಗಳನ್ನು ಕರೆದುಕೊಂಡು ಬಂದು ಡಿಜಿ ದೂರು ಬರೆಸಿಕೊಳ್ಳುತ್ತಾರೆ ಎಂದರೆ ಅವನು ಡಿಜಿ ಆಗಲು ಲಾಯಕ್ಕಾ? ಎಂದು ಏರುಧ್ವನಿಯಲ್ಲಿ ಕೂಗಾಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇದೇ ವೇಳೆ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್, ಬಹಳ ಅನ್ಯಾಯವಾಗಿದ್ದರೆ ನೋಟಿಸ್ ಕೊಡಿಸಿ. ಚರ್ಚೆ ಮಾಡೋಣ ಎಂದು ತಿಳಿಸಿದರು.

For Latest News Updates, Join Our Whatsapp Community🚩
RELATED ARTICLES

Most Popular