HomeKarnatakaಸಿದ್ದರಾಮಯ್ಯ ನಂತರ ರಾಜ್ಯದಲ್ಲಿ ಅಂತಹ ನಾಯಕರಿದ್ದರೆ ಅದು ಸತೀಶ್ ಜಾರಕಿಹೊಳಿ ಮಾತ್ರ: ಶಾಸಕ ಹೆಚ್.ಡಿ.ತಮ್ಮಯ್ಯ ಹೇಳಿಕೆ

ಸಿದ್ದರಾಮಯ್ಯ ನಂತರ ರಾಜ್ಯದಲ್ಲಿ ಅಂತಹ ನಾಯಕರಿದ್ದರೆ ಅದು ಸತೀಶ್ ಜಾರಕಿಹೊಳಿ ಮಾತ್ರ: ಶಾಸಕ ಹೆಚ್.ಡಿ.ತಮ್ಮಯ್ಯ ಹೇಳಿಕೆ

ಚಿಕ್ಕಮಗಳೂರು: ಸಿಎಂ ಸಿದ್ದರಾಮಯ್ಯ ನಂತರ ರಾಜ್ಯ ಕಾಂಗ್ರೆಸ್ ನಲ್ಲಿ ಅಂತಹ ಮತ್ತೊಬ್ಬ ನಾಯಕನಿದ್ದರೆ ಅದು ಸಚಿವ ಸತೀಶ್ ಜಾರಕಿಹೊಳಿ ಮಾತ್ರ ಎಂದು ಕಾಂಗ್ರೆಸ್ ಶಾಸಕ ಹೆಚ್.ಡಿ.ತಮ್ಮಯ್ಯ ತಿಳಿಸಿದ್ದಾರೆ.

ಚಿಕ್ಕಮಗಳೂರಿನ ತರಿಕೆರೆ ತಾಲೂಕಿನಲ್ಲಿ ನಡೆದ ವಿವಿಧ ಕಾಮಗಾರಿಗಳ ಶಂಕುಸ್ಥಾಪನೆ ವೇಳೆ ಮಾತನಾಡಿದ ಹೆಚ್.ಡಿ.ತಮ್ಮಯ್ಯ, ಸಚಿವ ಸತೀಶ್ ಜಾರಕಿಹೊಳಿ ಪರ ಬ್ಯಾಟಿಂಗ್ ಮಾಡಿದ್ದಾರೆ.

ರಾಜ್ಯದಲ್ಲಿ ಸಿದ್ದರಾಮಯ್ಯ ಹೊರತುಪಡಿಸಿದರೆ ಸತೀಶ್ ಜಾರಕಿಹೊಳಿಯವರೇ ಭವಿಷ್ಯದ ನಾಯಕರು. ಸತೀಶ್ ಜಾರಕಿಹೊಳಿಯವರ ರೀತಿ ಸರಳ-ಸಜ್ಜನ ಮನುಷ್ಯ ಮತ್ತೊಬ್ಬರಿಲ್ಲ. ಸಿದ್ದರಾಮಯ್ಯ ನಂತರ ರಾಜ್ಯ ಕಾಂಗ್ರೆಸ್ ನಲ್ಲಿ ಅಂತಹ ನಾಯಕನಿದ್ದರೆ ಅದು ಸತೀಶ್ ಜಾರಕಿಹೊಳಿ ಮಾತ್ರ ಎಂದು ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಒಂದೆಡೆ ಸಿಎಂ ಹುದ್ದೆಗಾಗಿ ಡಿಸಿಎಂ ಡಿ.ಕೆ.ಶಿವಕುಮಾರ್ ಕನಸುಕಾಣುತ್ತಿದ್ದರೆ, ಮತ್ತೊಂದೆಡೆ ಸಚಿವ ಸತೀಶ್ ಜಾರಕಿಹೊಳಿ ಮುಂದಿನ ಸಿಎಂ ಎಂಬ ಕೂಗು ಜೋರಾಗಿದೆ. ಇನ್ನೊಂದೆಡೆ ಖರ್ಗೆ ಹಾಗೂ ಜಿ.ಪರಮೇಶ್ವರ್ ಕೂಡ ಸಿಎಂ ಕುರ್ಚಿಗಾಗಿ ತೆರೆಮರೆಯಲ್ಲಿ ಕಸರತ್ತು ನಡೆಸಿದ್ದಾರೆ ಎನ್ನಲಾಗುತ್ತಿದೆ.

For Latest News Updates, Join Our Whatsapp Community🚩
RELATED ARTICLES

Most Popular