ಬೆಳಗಾವಿ: ಆರ್.ಎಸ್.ಎಸ್ ಬ್ಯಾನ್ ವಿಚಾರವಾಗಿ ರಾಜ್ಯದಲ್ಲಿ ನಡೆಯುತ್ತಿರುವ ಚರ್ಚೆ ವಿಚಾರವಾಗಿ ಪ್ರತಿಕ್ರಿಯಿಸಿರುವ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಹೆಚ್.ಕೆ.ಪಾಟೀಲ್ ಅಂತಹ ಯಾವುದೇ ಪ್ರಸ್ತಾವನೆ ಸರ್ಕಾರದ ಮುಂದೆ ಇಲ್ಲ ಎಂದು ತಿಳಿಸಿದ್ದಾರೆ.
ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಹೆಚ್.ಕೆ.ಪಾಟೀಲ್, ಯಾವುದೇ ಸಂಘ, ಸಂಸ್ಥೆ ಮತ್ತು ಸಂಘಟನೆಗಳನ್ನು ನಿಷೇಧಿಸುವ ಪ್ರಸ್ತಾವನೆ ಮತ್ತು ಚಿಂತನೆ ನಮ್ಮ ಸರ್ಕಾರದ ಮುಂದಿಲ್ಲ ಎಂದು ಸ್ಪಷ್ಟಪಡಿಸಿದರು.
ಆರ್.ಎಸ್.ಎಸ್ ಮಾತ್ರವಲ್ಲ ಭಜರಂಗದಳವನ್ನೂ ಬ್ಯಾನ್ ಮಾಡಬೇಕು ಎಂಬ ಕಾಂಗ್ರೆಸ್ ನಾಯಕ ಬಿ.ಕೆ.ಹರಿಪ್ರಸಾದ್ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸಿದ ಸಚಿವರು, ಬಿ.ಕೆ.ಹರಿಪ್ರಸಾದ್ ಅವರ ಅಭಿಪ್ರಾಯದ ಬಗ್ಗೆ ಅವರನ್ನೇ ಕೇಳಬೇಕು. ನಮ್ಮ ಸರ್ಕಾರದ ಮುಂದೆ ಅಂತಹ ಯಾವುದೇ ಚಿಂತನೆ ಇಲ್ಲ ಎಂದು ಹೇಳಿದರು.