HomeKarnatakaBIG NEWS: ಸರ್ಕಾರಕ್ಕೆ ಇದು ಎಚ್ಚರಿಕೆಯ ಗಂಟೆ: ಮಾಜಿ ಸಚಿವ ಹೆಚ್.ಕೆ.ಪಾಟೀಲ್ ವಾರ್ನಿಂಗ್

BIG NEWS: ಸರ್ಕಾರಕ್ಕೆ ಇದು ಎಚ್ಚರಿಕೆಯ ಗಂಟೆ: ಮಾಜಿ ಸಚಿವ ಹೆಚ್.ಕೆ.ಪಾಟೀಲ್ ವಾರ್ನಿಂಗ್

ಬೆಂಗಳೂರು: ನೂತನ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸರ್ಕಾರದಲ್ಲಿ ಮೊದಲ ಹಂತದ ಸಚಿವ ಸಂಪುಟದಲ್ಲಿ ಖಾತೆ ಹಂಚಿಕೆ ವಿಚಾರವಾಗಿ ಅಸಮಾಧಾನ ಸ್ಫೋಟಗೊಂಡಿದೆ. ನಗರಾಭಿವೃದ್ಧಿ ಖಾತೆ ಸಿಕ್ಕಿಲ್ಲ ಎಂದು ಅಸಮಾಧಾನಗೊಂಡು ರಾಮಲಿಂಗಾರೆಡ್ಡಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಇದರ ಬೆನ್ನಲ್ಲೇ ಖಾತೆ ಹಂಚಿಕೆ ವಿಚಾರವಾಗಿ ಮತ್ತೋರ್ವ ಸಚಿವ ಕೆ.ಹೆಚ್.ಮುನಿಯಪ್ಪ ಕೂಡ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ರಾಮಲಿಂಗಾರೆಡ್ಡಿ ರಾಜೀನಾಮೆ ಬೆನ್ನಲ್ಲೇ ಕೆ.ಹೆಚ್.ಮುನಿಯಪ್ಪ ತನಗೆ ಆಹಾರ ಖಾತೆ ಸಿಕ್ಕಿದ್ದಕ್ಕೆ ಅಸಮಾಧಾನ ವ್ಯಕ್ತಪಡಿಸಿದ್ದು, ಸಮಾಜ ಕಲ್ಯಾಣ ಅಥವಾ ಕೃಷಿ ಖಾತೆ ನೀಡುವಂತೆ ಒತ್ತಾಯಿಸಿದ್ದಾರೆ. ಆಹಾರ ಖಾತೆ ಸಚಿವನಾಗಿ ನಾನು ಚಾರ್ಜ್ ತೆಗೆದುಕೊಳ್ಳುವುದಿಲ್ಲ ಎಂದು ಬಹಿರಂಗವಾಗಿ ಹೇಳಿಕೆ ನೀಡಿದ್ದಾರೆ. ನೂತನ ಸರ್ಕಾರದಲ್ಲಿ ಆರಂಭವದಲ್ಲೇ ಸಾಲು ಸಾಲು ಸಚಿವರ ಅಸಮಾಧಾನ ರಾಜ್ಯ ರಾಜಕೀಯದಲ್ಲಿ ಭಾರಿ ಚರ್ಚೆಗೆ ಕಾರಣವಾಗಿದೆ.

ಈ ಬೆಳವಣಿಗೆಗಳ ಬಗ್ಗೆ ಮಾಜಿ ಸಚಿವ ಹೆಚ್.ಕೆ.ಪಾಟೀಲ್ ಪ್ರತಿಕ್ರಿಯಿಸಿದ್ದು, ಇದು ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ಗಂಟೆ ಎಂದಿದ್ದಾರೆ. ಹಿರಿಯ ನಾಯಕರಾಗಿರುವ ರಾಮಲಿಂಗಾರೆಡ್ಡಿ ರಾಜೀನಾಮೆ ನೀಡಿದ್ದು ಎಚ್ಚರಿಕೆ ಗಂಟೆ. ಸಂಬಂಧಪಟ್ಟ ನಾಯಕರು ಇದನ್ನು ಗಂಭೀರವಾಗಿ ಪರಿಗಣಿಸಿ ಗಮನಹರಿಸಬೇಕು ಎಂದು ವಾರ್ನಿಂಗ್ ನೀಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ರಾಮಲಿಂಗಾರೆಡ್ಡಿ ನನಗೆ ಸ್ನೇಹಿತರು. ರಾಜೀನಾಮೆ ವಿಚಾರ ಮಾಧ್ಯಮಗಳಲ್ಲಿ ನೋಡಿದೆ. ಫೋನ್ ಮಾಡಿ ಮಾತನಾಡಿದೆ. ರಾಜೀನಾಮೆ ನಿರ್ಣಯವನ್ನು ಪುನರ್ ಪರಿಶೀಲಿಸುವಂತೆ ಹೇಳಿದ್ದೇನೆ. ಆದರೆ ಅವರು ತಮ್ಮ ಅಭಿಪ್ರಾಯವನ್ನು ತಿಳಿಸಿದ್ದಾರೆ. ಈ ಸಬಂಧ ಪಕ್ಷದ ನಾಯಕರು ತಕ್ಷಣ ಈ ಬಗ್ಗೆ ಗಮನಹರಿಸಬೇಕು. ಇದನ್ನು ಲಘುವಾಗಿ ಪರಿಗಣಿಸಬಾರದು. ಗಂಭೀರವಾಗಿ ಪರಿಗಣಿಸಿ ಎಚ್ಚೆತ್ತುಕೊಳ್ಳಬೇಕು ಎಂದು ಹೇಳಿದರು.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular