HomeKarnatakaBIG NEWS: ಹೆಚ್.ಎಂ.ರೇವಣ್ಣ ವಿರುದ್ಧ ಹಲ್ಲೆ ಆರೋಪ: ಸಿಎಂ ಸಿದ್ದರಾಮಯ್ಯಗೆ ದೂರು ನೀಡಿದ ಕೈ ಕಾರ್ಯಕರ್ತೆ...

BIG NEWS: ಹೆಚ್.ಎಂ.ರೇವಣ್ಣ ವಿರುದ್ಧ ಹಲ್ಲೆ ಆರೋಪ: ಸಿಎಂ ಸಿದ್ದರಾಮಯ್ಯಗೆ ದೂರು ನೀಡಿದ ಕೈ ಕಾರ್ಯಕರ್ತೆ ನಂದಿನಿ

ಬೆಂಗಳೂರು: ಮಾಜಿ ಸಚಿವ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಹೆಚ್.ಎಂ.ರೇವಣ್ಣ ಕಾಂಗ್ರೆಸ್ ಕಾರ್ಯಕರ್ತೆ ನಂದಿನಿ ನಾಗರಾಜ್ ಮೇಲೆ ಹಲ್ಲೆ ನಡೆಸಿರುವ ಆರೋಪಕ್ಕೆ ಸಂಬಂಧಿಸಿದಂತೆ, ಹಲ್ಲೆಗೊಳಗಾದ ನಂದಿನಿ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ದೂರು ಸಲ್ಲಿಸಿದರು.

ಈಗಾಗಲೇ ಕಾಂಗ್ರೆಸ್ ಕಾರ್ಯಕರ್ತೆ ನಂದಿನಿ ನಾಗರಾಜ್ ಹೆಚ್.ಎಂ.ರೇವಣ್ಣ ವಿರುದ್ಧ ಡಿಜಿ & ಐಜಿಪಿ, ಸಮಾಜಕಲ್ಯಾಣ ಇಲಾಖೆಗೂ ದೂರು ನೀಡಿದ್ದಾರೆ. ಹೆಚ್,ಎಂ.ರೇವಣ್ಣ ಜಾತಿ ನಿಂದನೆ ಮಾಡಿ ನನ್ನ ಮೇಲೆ ಹಲ್ಲೆ ನಡೆಸಿದ್ದರೆ. ಈ ಬಗ್ಗೆ ಪೊಲೀಸರಿಗೆ ದೂರು ನೀಡಿದರೂ ಅವರ ವಿರುದ್ಧ ಕ್ರಮ ಕೈಗೊಂಡಿಲ್ಲ ಎಂದು ನಂದಿನಿ ದೂರಿನಲ್ಲಿ ತಿಳಿಸಿದ್ದಾರೆ.

ಹೆಚ್.ಎಂ.ರೇವಣ್ಣ ವಿರುದ್ಧ ಕ್ರಮ ಕೈಗೊಳ್ಳಬೇಕು ಹಾಗೂ ತನಗೆ ರಕ್ಷಣೆ ನೀಡುವಂತೆ ನಂದಿನಿ ನಾಗರಾಜ್ ಮನವಿ ಮಾಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
RELATED ARTICLES

Most Popular