ಬೆಳಗಾವಿ : ಬೆಳಗಾವಿಯ ಕಿತ್ತೂರು ಚೆನ್ನಮ್ಮ ಕಿರುಮೃಗಾಲಯದಲ್ಲಿ ಕೃಷ್ಣಮೃಗಗಳ ಸಾವಿನ ಸಂಖ್ಯೆ 31 ಕ್ಕೆ ಏರಿಕೆಯಾಗಿದೆ. ಸಾಂಕ್ರಾಮಿಕ ರೋಗದಿಂದ ಕೃಷ್ಣಮೃಗಗಳು ಮೃತಪಟ್ಟಿರುವುದು ಧೃಡವಾಗಿದೆ.
ಹೌದು. ಬೆಳಗಾವಿಯಲ್ಲಿ 31 ಕೃಷ್ಣಮೃಗಗಳ ಸಾವಿಗೆ ಹೆಚ್ ಎಸ್ ಬ್ಯಾಕ್ಟೀರಿಯಾ ಕಾರಣ ಎಂದು ಮರಣೋತ್ತರ ಪರೀಕ್ಷೆಯಲ್ಲಿ ಧೃಡವಾಗಿದೆ.
ಬೆಳಗಾವಿಯ ಭೂತರಾಯನಹಟ್ಟಿ ಬಳಿಯ ಕಿತ್ತೂರು ಚೆನ್ನಮ್ಮ ಕಿರು ಮೃಗಾಲಯದಲ್ಲಿ ಇದುವರೆಗೆ ಒಟ್ಟು 31 ಕೃಷ್ಣಮೃಗಗಳು ಸಾವನ್ನಪ್ಪಿದೆ. 31 ಕೃಷ್ಣಮೃಗಗಳ ಸಾವಿಗೆ ಹೆಚ್ ಎಸ್ ಬ್ಯಾಕ್ಟೀರಿಯಾ ಕಾರಣ ಎಂದು ಪರೀಕ್ಷೆಯಲ್ಲಿ ಧೃಡವಾಗಿದೆ.ಬೆಂಗಳೂರಿನ ಬನ್ನೇರುಘಟ್ಟ ಪಶು ವಿಜ್ಞಾನ ವಿದ್ಯಾಲಯದ ತಜ್ಞರ ತಂಡ ಕಿತ್ತೂರು ಚೆನ್ನಮ್ಮ ಮೃಗಾಲಯಕ್ಕೆ ಭೇಟಿ ನೀಡಿದ್ದು, ಕೃಷ್ಣಮೃಗಗಳ ಮರಣೋತ್ತರ ಪರೀಕ್ಷೆ ನಡೆಸಿದೆ. ಕೃಷ್ಣಮೃಗಗಳು ಹೆಚ್ ಎಸ್ ಬ್ಯಾಕ್ಟೀರಿಯಾದಿಂದ ಸಾವಾಗಿದೆ ಎಂದು ತಿಳಿಸಿದ್ದಾರೆ. ಹಾಗೂ ತಾಪಮಾನ ಕುಸಿತ, ಒತ್ತಡದಿಂದಲೂ ಕೃಷ್ಣಮೃಗಗಳು ಮೃತಪಟ್ಟಿದೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.
ಈ ನಡುವೆ ಮೃಗಾಲಯದಲ್ಲಿರುವ ಉಳಿದ 7 ಕೃಷ್ಣಮೃಗಗಳಿಗೆ ಮುಂಜಾಗೃತಾ ಕ್ರಮವಾಗಿ ತಪಾಸಣೆ, ಚಿಕಿತ್ಸೆ ನೀಡಲಾಗುತ್ತಿದೆ. ಇತರ ಪ್ರಾಣಿಗಳಿಗೂ ತೊಂದರೆಯಾಗದಂತೆ ಮುನ್ನೆ಼ಚ್ಚರಿಕೆ ವಹಿಸಲಾಗಿದೆ.
