HomeKarnatakaತನ್ವೀರ್ ಸೇಠ್ ಗೆ ಸಚಿವ ಸ್ಥಾನ ಕೊಡದಿರಲು ಕಾರಣ ಬಿಚ್ಚಿಟ್ಟ ಹೆಚ್.ವಿಶ್ವನಾಥ್

ತನ್ವೀರ್ ಸೇಠ್ ಗೆ ಸಚಿವ ಸ್ಥಾನ ಕೊಡದಿರಲು ಕಾರಣ ಬಿಚ್ಚಿಟ್ಟ ಹೆಚ್.ವಿಶ್ವನಾಥ್

ಮೈಸೂರು: ಈ ಬಾರಿ ಸಚಿವ ಸಂಪುಟ ವಿಸ್ತರಣೆ ವಿಚಾರವಾಗಿ ಕಾಂಗ್ರೆಸ್ ಹೈಕಮಾಂಡ್ ಸೂಕ್ತವಾಗಿ ನಡೆದುಕೊಂಡಿದೆ ಎಂದು ಮಾಜಿ ವಿಧಾನ ಪರಿಷತ್ ಸದಸ್ಯ ಹೆಚ್.ವಿಶ್ವನಾಥ್ ಅಭಿಪ್ರಾಯಪಟ್ಟಿದ್ದಾರೆ.

ಮೈಸೂರಿನಲ್ಲಿ ಸುದ್ದಿಗೋಷ್ಥಿ ನಡೆಸಿದ ಹೆಚ್.ವಿಶ್ವನಾಥ್, ಸಂಪುಟ ವಿಸ್ತರಣೆ ಸರಿಯಾಗಿ ಆಗಿದೆ. ಆದರೆ ಶಾಸಕ ತನ್ವೀರ್ ಸೇಠ್ ಹಾಗೂ ಗಾಯತ್ರಿ ಶಾಂತೇಗೌಡರಿಗೆ ಸಚಿವ ಸ್ಥಾನ ತಪ್ಪಿಸಿದ್ದು ಸರಿಯಲ್ಲ ಎಂದು ಹೇಳಿದರು.

ತನ್ವೀರ್ ಸೇಠ್ ಸಚಿವರಾದರೆ ತಮ್ಮ ಪುತ್ರನಿಗೆ ಮೈಸೂರು ಜಿಲ್ಲೆಯ ಉಸ್ತುವಾರಿ ಕೈತಪ್ಪುತ್ತದೆ ಎಂಬ ಕಾರಣಕ್ಕಾಗಿ ಸಿದ್ದರಾಮಯ್ಯ ಅವರಿಗೆ ಸಚಿವ ಸ್ಥಾನ ಸಿಗದಂತೆ ಮಾಡಿದರು. ಇನ್ನು ಕುರುಬ ಸಮುದಾಯದ ಗಾಯತ್ರಿ ಶಾಂತೇಗೌಡರಿಗೆ ಕಡೆ ಗಳಿಗೆಯಲ್ಲಿ ಸಚಿವ ಸ್ಥಾನ ಸಿಗದಂತೆ ಮಾಡಿ ಅವಮಾನ ಮಾಡಿದ್ದಾರೆ. ಮಹಿಳಾ ಕೋಟಾದಲ್ಲಿ ಗಾಯತ್ರಿ ಶಾಂತೇಗೌಡರಿಗೆ ಸಚಿವ ಸ್ಥಾನ ಸಿಗುವಂತೆ ಮಾಡಬೇಕು ಎಂದು ಒತ್ತಾಯಿಸಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮಹಿಳಾ ಕೋಟಾದಲ್ಲಿ ಉಮಾಶ್ರೀ ಅವರಿಗೆ ಸಚಿವ ಸ್ಥಾನ ನೀಡುವಂತೆ ಶಿಫಾರಸು ಮಾಡಲಾಗಿತ್ತು. ಆದರೆ ಸಿದ್ದರಾಮಯ್ಯ ಸಿಎಂ ಆದಾಗಲೆಲ್ಲ ಉಮಾಶ್ರೀ ಸಚಿವರಾಗಿದ್ದಾರೆ. ಈ ಬಾರಿ ಗಾಯತ್ರಿ ಶಾಂತೇಗೌಡರನ್ನು ಪರಿಗಣಿಸಬೇಕು ಎಂದರು.

ಇನ್ನು ಸಭಾಪತಿ ಬಸವರಾಜ್ ಹೊರಟ್ಟಿ ರಾಜೀನಾಮೆ ವಿಚಾರವಾಗಿ ಮಾತನಾಡಿದ ವಿಶ್ವನಾಥ್, ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ನೀಡಬೇಕು. ಸತತವಾಗಿ 8 ಬಾರಿ ವಿಧಾನ ಪರಿಷತ್ತಿಗೆ ಆಯ್ಕೆಯಾಗಿದ್ದಾರೆ, ಅವರಿಗೆ ಅನುಭವ ಇದೆ. ಈಗ ವಿಧಾನ ಪರಿಷತ್​​​ನಲ್ಲಿ ಬಿಜೆಪಿ ಬಹುಮತ ಕಳೆದುಕೊಂಡಿದೆ, ಕಾಂಗ್ರೆಸ್​​ಗೆ ಬಹುಮತ ಇದೆ. ಆದ್ದರಿಂದ ಕಾಂಗ್ರೆಸ್, ಸಭಾಪತಿ ಆಯ್ಕೆ ಮಾಡುತ್ತದೆ. ಕೂಡಲೇ ಹೊರಟ್ಟಿ ರಾಜೀನಾಮೆ ನೀಡುವುದು ಒಳ್ಳೆಯದು ಎಂದರು.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular