HomeLive Newsಪೋಕ್ಸೋ ಕೇಸ್ ನಲ್ಲಿ ಸಿಲುಕಿಕೊಂಡಿರುವ ಬಿ.ಎಸ್.ಯಡಿಯೂರಪ್ಪ ಅಭಿಮಾನೋತ್ಸವ ಕಾರ್ಯಕ್ರಮ ಸರಿಯಲ್ಲ; ಅವರನ್ನು ಸನ್ಮಾನಿಸಲು ಕೇಂದ್ರ ಗೃಹ...

ಪೋಕ್ಸೋ ಕೇಸ್ ನಲ್ಲಿ ಸಿಲುಕಿಕೊಂಡಿರುವ ಬಿ.ಎಸ್.ಯಡಿಯೂರಪ್ಪ ಅಭಿಮಾನೋತ್ಸವ ಕಾರ್ಯಕ್ರಮ ಸರಿಯಲ್ಲ; ಅವರನ್ನು ಸನ್ಮಾನಿಸಲು ಕೇಂದ್ರ ಗೃಹ ಸಚಿವರೇ ಬರುತ್ತಿರುವುದು ದುರಂತ: ಹೆಚ್.ವಿಶ್ವನಾಥ್ ಕಿಡಿ

ಮೈಸೂರು: ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಜನಸೇವೆಯಲ್ಲಿ 50 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಮೇ.9ರಂದು ಚಿತ್ರದುರ್ಗದಲ್ಲಿ ಬಿಜೆಪಿ ಅಭಿಮಾನೋತ್ಸವ ಕಾರ್ಯಕ್ರಮವನ್ನು ಆಯೋಜಿಸಿದೆ. ಈ ಬಗ್ಗೆ ಸ್ವಪಕ್ಷದ ನಾಯಕನೇ ವಿರೋಧ ವ್ಯಕ್ತಪಡಿಸಿದ್ದಾರೆ.

ಮೈಸೂರಿನಲ್ಲಿ ಸುದ್ದಿಗೋಷ್ಠಿ ನಡೆಸಿದ ವಿಧಾನಪರಿಷತ್ ಬಿಜೆಪಿ ಸದಸ್ಯ ಹೆಚ್.ವಿಶ್ವನಾಥ್, ರಾಜ್ಯದ ಮಾಜಿ ಮುಖ್ಯಮಂತ್ರಿಯಾಗಿರುವ ಯಡಿಯೂರಪ್ಪ ವಿರುದ್ಧ ದೇಶದ ಅತ್ಯಂತ ಕಠಿಣ ಕಾನೂನು ಪೋಕ್ಸೋ ಪ್ರಕರಣದಡಿ ಕೇಸ್ ದಾಖಲಾಗಿದೆ. ಪೋಕ್ಸೋ ಕೇಸ್ ನಲ್ಲಿ ಸಿಲುಕಿರುವ ಯಡಿಯೂರಪ್ಪ ಅವರಿಗೆ ಅಭಿಮಾನೋತ್ಸವ ಕಾರ್ಯಕ್ರ ಸರಿಯಲ್ಲ ಎಂದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಈ ಕಾರ್ಯಕ್ರಮದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪನವರನ್ನು ಅಭಿನಂದಿಸಿ ಸನ್ಮಾನಿಸಲು ಬರುತ್ತಿದ್ದಾರೆ. ಪೋಕ್ಸೋ ಕೇಸ್ ಆರೋಪದಲ್ಲಿ ವಿಚಾರಣೆ ಎದುರಿಸುತ್ತಿರುವವವನ್ನು ಗೃಹ ಸಚಿವರೇ ಸನ್ಮಾನಿಸುತ್ತಿರುವುದು ನಿಜಕ್ಕೂ ದುರಂತವೇ ಸರಿ ಎಂದು ಕಿಡಿಕಾರಿದ್ದಾರೆ.

ಪೋಕ್ಸೋ ಪ್ರಕರಣದ ಆರೋಪಕ್ಕೆ ಯಡಿಯೂರಪ್ಪ ಗುರಿಯಾಗಿದ್ದಾರೆ. ಇದು ಗಂಭೀರ ಪ್ರಕರಣವಾಗಿದೆ. ಇದೀಗ ಅವರ ಅಭಿಮಾನೋತ್ಸವಕ್ಕೆ ಮುಂದಾಗಿರುವುದು ಸರಿಯಲ್ಲ. ಈ ಎರಡೂ ಪ್ರಕರಣಗಳು ರಾಜ್ಯಕ್ಕೆ ಕಪ್ಪುಚುಕ್ಕೆಯಾಗಿ ಪರಿಣಮಿಸಿವೆ. ವಕೀಲ ಸಿದ್ದರಾಮಯ್ಯಗೆ ಇದೆಲ್ಲಾ ಗೊತ್ತಿಲ್ಲವೇ ಎಂದು ವಾಗ್ದಾಳಿ ನಡೆಸಿದ್ದಾರೆ.

ಇದೇ ವೇಳೆ ಬಿಜೆಪಿ ವಿಧಾನಪರಿಷತ್ ಸದಸ್ಯ ಹೆಚ್​ ವಿಶ್ವನಾಥ್ ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ್ದಾರೆ. ಇನ್ಮುಂದೆ ಯಾವುದೇ ಚುನಾವಣೆಗಳಲ್ಲಿ ಸ್ಪರ್ಧೆ ಮಾಡುವುದಿಲ್ಲ ಎಂದು ತಿಳಿಸಿದ್ದಾರೆ.

ಚುನಾವಣೆಗಳಲ್ಲಿ ಸ್ಪರ್ಧಿಸಲ್ಲ ಆದರೆ ರಾಜಕೀಯದಲ್ಲಿಯೇ ಇರುತ್ತೇನೆ ಎಂದು ತಿಳಿಸಿದ್ದಾರೆ. ಚುನಾವಣೆಗೆ ಸ್ಪರ್ಧಿಸಿದಾಗ ಜನರೇ ಹಣ ನೀಡಿ ಆಶೀರ್ವದಿಸಿದ್ದರು ಈಗ ಹಣ ನೀಡಿ ಚುನಾವಣೆ ಎದುರಿಸುವ ಪರಿಸ್ಥಿತಿ ನಿರ್ಮಾಣವಾಗಿದೆ. ಸದ್ಯದ ಪರಿಸ್ಥಿತಿಯಲ್ಲಿ ಚುನಾವಣೆ ಎದುರಿಸಲು 50 ಕೋಟಿ ರೂಪಾಯಿ ಹಣ ಬೇಕು. 50 ಕೋಟಿ ರೂ. ಖರ್ಚು ಮಾಡಿ ಚುನಾವಣೆ ಎದುರಿಸುವಷ್ಟು ಶಕ್ತಿ ನನಗಿಲ್ಲ ಎಂದಿದ್ದಾರೆ.

ನನ್ನ ಮಕ್ಕಳು ಕೂಡ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ. ಅವರ ಶಕ್ತಾನುಸಾರ ರಾಜಕೀಯದಲ್ಲಿ ಮುಂದುವರಿಯುತ್ತಾರೆ. ನಾನು ಸಹ ರಾಜಕೀಯದಲ್ಲಿ ಮುಂದುವರಿಯುತ್ತೇನೆ. ಆದರೆ ಚುನಾವಣೆಗೆ ಸ್ಪರ್ಧಿಸುವುದಿಲ್ಲ ಎಂದು ಸ್ಪಷ್ಟಪಡಿಸಿದರು.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular