ಹಾಸನ: ಬೈಕ್ ಹಾಗೂ ಬಸ್ ಗಳ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಹೆಡ್ ಕಾನ್ಸ್ ಟೇಬಲ್ ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆಯ ಚನ್ನರಾಯಪಟ್ಟಣದಲ್ಲಿ ನಡೆದಿದೆ.
ಬೀರಲಿಂಗ (41) ಮೃತ ಹೆಡ್ ಕಾನ್ಸ್ ಟೇಬಲ್. ಚನ್ನರಾಯಪಟ್ಟಣದ ನಗರ ಠಾಣೆಯಲ್ಲಿ ರೈಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದರು. ಮಧ್ಯಾಹ್ನ ಮನೆಗೆ ಊಟಕ್ಕೆಂದು ಬೈಕ್ ನಲ್ಲಿ ಹೋಗುತ್ತಿದ್ದ ವೇಳೆ ಬೈಕ್ ಹಾಗೂ ಸಾರಿಗೆ ಬಸ್ ನಡುವೆ ಡಿಕ್ಕಿಯಾಗಿದೆ.
ಗಂಭೀರವಾಗಿ ಗಾಯಗೊಂಡಿದ್ದ ಬೀರಲಿಂಗ ಅವರನ್ನು ಬೆಳ್ಳೂರಿನ ಬಿಜಿಎಸ್ ಆಸ್ಪತ್ರೆಗೆ ಸಾಗಿಸಲಾಗಿತ್ತು. ಆದರೆ ಮಾರ್ಗಮಧ್ಯೆಯೇ ಅವರು ಕೊನೆಯುಸಿರೆಳೆದಿದ್ದಾರೆ.
ಘಟನಾ ಸ್ಥಳಕ್ಕೆ ಚನ್ನರಾಯಪಟ್ಟಣ ಸಂಚಾರಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

