ನಂದಿ ಬೆಟ್ಟದಲ್ಲಿ ಶೌಚಾಲಯ ನಿರ್ಮಾಣದ ಜೊತೆಗೆ ಪ್ಲಾಸ್ಟಿಕ್ ಬಾಟಲಿ ಪುಡಿ ಮಾಡುವ ಯಂತ್ರ ಅಳವಡಿಸಿದ ‘ಹ್ಯಾಬಿಟ್ಯಾಟ್ ಫಾರ್ ಹ್ಯೂಮಿನಿಟಿ’ ಸಂಸ್ಥೆ

ವಾರಾಂತ್ಯದ ದಿನಗಳಲ್ಲಿ ಪ್ರವಾಸಿಗರಿಗೆ ನಂದಿ ಬೆಟ್ಟ ಅಚ್ಚುಮೆಚ್ಚಿನ ಸ್ಥಳ. ಆದರೆ ಕೆಲವೊಂದು ಅಗತ್ಯ ಮೂಲಭೂತ ಸೌಕರ್ಯಗಳಿಲ್ಲದ ಕಾರಣ ಪ್ರವಾಸಿಗರಿಗೆ ತೊಂದರೆಯಾಗಿತ್ತು.

ಇದೀಗ ‘ಹ್ಯಾಬಿಟ್ಯಾಟ್ ಫಾರ್ ಹ್ಯೂಮಾನಿಟಿ’ ಸಂಸ್ಥೆ ನಂದಿಬೆಟ್ಟದಲ್ಲಿ ಶೌಚಾಲಯ ನಿರ್ಮಿಸುವುದರ ಜೊತೆಗೆ ಪ್ಲಾಸ್ಟಿಕ್ ಬಾಟಲಿ ಪುಡಿ ಮಾಡುವ ಯಂತ್ರವನ್ನು ಅಳವಡಿಸಿದೆ. ಈ ಯಂತ್ರದ ಅಳವಡಿಕೆ ಕಾರಣಕ್ಕೆ ಪ್ರವಾಸಿಗರು ಎಲ್ಲೆಂದರಲ್ಲಿ ಪ್ಲಾಸ್ಟಿಕ್ ಬಾಟಲಿ ಬಿಸಾಡುವುದಕ್ಕೆ ಕಡಿವಾಣ ಬೀಳಲಿದೆ.

ಈ ಮೊದಲು ಪ್ರವಾಸಿಗರು ಪ್ಲಾಸ್ಟಿಕ್ ಬಾಟಲಿಯನ್ನು ಎಲ್ಲೆಂದರಲ್ಲಿ ಬಿಸಾಡುತ್ತಿದ್ದ ಕಾರಣಕ್ಕೆ ಮಾಲಿನ್ಯ ಉಂಟಾಗುತ್ತಿತ್ತು. ಹೀಗಾಗಿ ಮಾಜಿ ಸಚಿವ ಡಾ. ಕೆ. ಸುಧಾಕರ್ ಸಂಸ್ಥೆಗೆ ಸಲಹೆ ನೀಡಿದ್ದು, ಇದಕ್ಕೆ ಸ್ಪಂದಿಸಿ ಈ ಕಾರ್ಯವನ್ನು ಮಾಡಲಾಗಿದೆ. ಸುಧಾಕರ್ ಅವರು ಸಾಮಾಜಿಕ ಜಾಲತಾಣದಲ್ಲಿ ಈ ವಿಚಾರವನ್ನು ಹಂಚಿಕೊಂಡಿದ್ದಾರೆ.

https://twitter.com/DrSudhakar_/status/1693569328619438252

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read