ಬಿಜೆಪಿ ಜೊತೆ ಮೊದಲೇ ‘ಮೈತ್ರಿ’ ಮಾಡಿಕೊಂಡಿದ್ರೆ 5 ವರ್ಷ ಸಿಎಂ ಆಗ್ತಿದ್ದೆ : H.D ಕುಮಾರಸ್ವಾಮಿ

ಬೆಂಗಳೂರು : ಬಿಜೆಪಿ ಜೊತೆ ಮೊದಲೇ ಮೈತ್ರಿ ಮಾಡಿಕೊಂಡಿದ್ದರೆ 5 ವರ್ಷ ಸಿಎಂ ಆಗ್ತಿದ್ದೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಮಾಜಿ ಪ್ರಧಾನಿ HD ದೇವೇಗೌಡ ಹಾಗೂ HD ಕುಮಾರಸ್ವಾಮಿ ಅವರು ಜಂಟಿ ಸುದ್ದಿಗೋಷ್ಠಿ ನಡೆಸಿದ್ದಾರೆ.ನಂತರ ಮಾತನಾಡಿದ ಕುಮಾರಸ್ವಾಮಿ 2018 ರಲ್ಲಿ ಸಿದ್ದರಾಮಯ್ಯ, ಖರ್ಗೆ,ಡಿಕೆಶಿ, ಪರಮೇಶ್ವರ್ ಇದ್ರು. ನಮ್ಮ ಪಕ್ಷಕ್ಕೆ ನನ್ನ ಮಗನಿಗೆ ಸಿಎಂ ಸ್ಥಾನ ಬೇಡ ಅಂತ ದೇವೇಗೌಡರು ಹೇಳಿದ್ರು. ಕಾಂಗ್ರೆಸ್ ಕೇಂದ್ರ ನಾಯಕರು ಇಲ್ಲ ಕುಮಾರಸ್ವಾಮಿ ಸಿಎಂ ಆಗಬೇಕು ಎಂದು ಹೇಳಿದ್ದರು. ಅವತ್ತೆ ಮಧ್ಯಾಹ್ನ 2 ಗಂಟೆಗೆ ಅಮಿಶ್ ಶಾ ಕಾಲ್ ಮಾಡಿದ್ರು. ಅಂದು ನಾನು ಒಪ್ಪಿಗೆ ನೀಡಿದ್ರೆ ಐದು ವರ್ಷಗಳ ಸಿಎಂ ಆಗ್ತಾ ಇದ್ದೆ ಎಂದು ಕುಮಾರಸ್ವಾಮಿ ಹೇಳಿದ್ದಾರೆ.

ನಾನು ಅಲ್ಪಸಂಖ್ಯಾತರೇ ಅಲ್ಲ ಎಲ್ಲ ಸಮುದಾಯಗಳ ರಕ್ಷಣೆ ಮಾಡುತ್ತೇವೆ. ಬಿಜೆಪಿ ಬಿ ಟೀಮ್ ಅಂತ ಹೇಳ್ತಾ ಇದ್ದಾರೆ ಮಹಾ ನಾಯಕರು ಎಂದು ಮಾಜಿ ಸಿಎಂ ಕುಮಾರಸ್ವಾಮಿ ಹೇಳಿದ್ದಾರೆ.

ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವುದನ್ನು ಖಂಡಿಸಿ ವಿಧಾನಸೌಧದ ಗಾಂಧಿ ಪ್ರತಿಮೆ ಬಳಿ ಬಿಜೆಪಿ, ಜೆಡಿಎಸ್ ನಿಂದ ಪ್ರತಿಭಟನೆ ನಡೆಯುತ್ತಿದೆ. ಮೈತ್ರಿ ಬಳಿಕ ಮೊದಲ ಬಾರಿಗೆ ಬಿಎಸ್ ಯಡಿಯೂರಪ್ಪರನ್ನು ಹೆಚ್ಡಿ ಕುಮಾರಸ್ವಾಮಿ ಭೇಟಿಯಾಗಿದ್ದಾರೆ.

TAGGED:
Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read