ಬೆಂಗಳೂರು : ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಈ ವಾರಪೂರ್ತಿ ಗುಡುಗು, ಮಿಂಚು ಮತ್ತು ಬಿರುಗಾಳಿ ಸಹಿತ ಆಲಿಕಲ್ಲು ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ಮೇಲ್ಮೈ ಸುಳಿಗಾಳಿ ಮತ್ತು ತೇವಾಂಶ ಭರಿತ ಮೋಡಗಳಿಂದಾಗಿ ಮಳೆಯಾಗುತ್ತಿದೆ.
ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ಮೇಲ್ಮೈ ಸುಳಿಗಾಳಿ ಹಾಗೂ ತೇವಾಂಶ ಭರಿತ ಮೋಡಗಳ ಪ್ರಭಾವದಿಂದಾಗಿ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಈ ವಾರಪೂರ್ತಿ ಗುಡುಗು, ಮಿಂಚು ಹಾಗೂ ಬಿರುಗಾಳಿ ಸಹಿತ ಭಾರಿ ಆಲಿಕಲ್ಲು ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಎಲ್ಲೆಲ್ಲಿ ಮಳೆ ?
ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ ಮತ್ತು ಹಾಸನ ಜಿಲ್ಲೆಗಳಲ್ಲಿ ಮಳೆಯಾಗಲಿದೆ.
ಮುಂದಿನ 3 ದಿನಗಳು: ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ವಿಜಯನಗರ, ಮೈಸೂರು ಮತ್ತು ಚಾಮರಾಜನಗರದಲ್ಲಿ ಆಲಿಕಲ್ಲು ಮಳೆಯ ಮುನ್ಸೂಚನೆ ಇದೆ.
ಮಾರ್ಚ್ 25 ಮತ್ತು 26: ಚಿತ್ರದುರ್ಗ, ಕೊಪ್ಪಳ, ದಾವಣಗೆರೆ ಮತ್ತು ತುಮಕೂರಿನಲ್ಲಿ ಮಳೆಯಾಗುವ ಸಾಧ್ಯತೆ ಇದೆ.
ಮಾರ್ಚ್ 29 ರಿಂದ (2 ದಿನ): ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮಂಡ್ಯ ಮತ್ತು ಕೋಲಾರ ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಆಲಿಕಲ್ಲು ಮಳೆಯಾಗಲಿದೆ.
ಗಾಳಿಯ ವೇಗ: ಕೆಲವು ಜಿಲ್ಲೆಗಳಲ್ಲಿ ಗಂಟೆಗೆ ಸುಮಾರು 40 ಕಿ.ಮೀ ವೇಗದಲ್ಲಿ ಬಿರುಗಾಳಿ ಬೀಸುವ ಸಾಧ್ಯತೆಯಿದೆ.ರಾಜ್ಯದ ಹಲವೆಡೆ ಬಿಸಿಲು ಮುಂದುವರಿದಿದ್ದರೂ, ಮಧ್ಯಾಹ್ನ ಮತ್ತು ಸಂಜೆ ವೇಳೆ ಮೋಡ ಕವಿದ ವಾತಾವರಣ ಇರಲಿದೆ. ಸೋಮವಾರ ಕಲಬುರಗಿಯಲ್ಲಿ ಗರಿಷ್ಠ 37.3 ಡಿ.ಸೆ. ಉಷ್ಣಾಂಶ ದಾಖಲಾಗಿತ್ತು.

