HomeKarnatakaBIG NEWS: ಹಜ್ ಯಾತ್ರೆಗೆ ತೆರಳಿದ್ದ ಒಂದೇ ಕುಟುಂಬದ ಮೂವರು ದುರ್ಮರಣ

BIG NEWS: ಹಜ್ ಯಾತ್ರೆಗೆ ತೆರಳಿದ್ದ ಒಂದೇ ಕುಟುಂಬದ ಮೂವರು ದುರ್ಮರಣ

ಕಾರವಾರ: ಹಜ್ ಯಾತ್ರೆಗೆ ತೆರಳಿದ್ದ ಉತ್ತರ ಕನ್ನದ ಜಿಲ್ಲೆಯ ಮುಂಡಗೋಡ ತಾಲೂಕು ಮೂಲದ ಒಂದೇ ಕುಟುಂಬದ ಮೂವರು ಸಾವನ್ನಪ್ಪಿರುವ ಘಟನೆ ಬೆಳಕಿಗೆ ಬಂದಿದೆ.

ಫಯಾಜ್ ರೋಣ, ಪತ್ನಿ ಆಫ್ರಿನಾ ಬಾನು, ಅಣ್ಣನ ಮಗ ಆಯಾನ್ ರೋಣ ಮ್ರ‍ಿತ ದುರ್ದೈವಿಗಳು. ಮಾರ್ಚ್ 26ರಂದು ಇವರು ಮಕ್ಕಾ ಮದೀನಾಕ್ಕೆ ತೆರಳಿದ್ದರು. ಈ ವೇಳೆ ಅಪಘಾತಕ್ಕೀಡಾಗಿ ಮೂವರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಅಪಘಾತದಲ್ಲಿ ಫಯಾಝ್ ರೋಣ ಅವರ ಇಬ್ಬರು ಮಕ್ಕಳು ಗಂಭೀರವಾಗಿ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
RELATED ARTICLES

Most Popular