HomeKarnatakaBREAKING: 5 ಬಾರಿ ಶಾಸಕರಾಗಿದ್ದ ‘ಕುಂದಾಪುರ ವಾಜಪೇಯಿ’ ಹಾಲಾಡಿ ಶ್ರೀನಿವಾಸ ಶೆಟ್ಟಿ ಅಚ್ಚರಿ ನಿರ್ಧಾರ: ಚುನಾವಣೆಯಿಂದ...

BREAKING: 5 ಬಾರಿ ಶಾಸಕರಾಗಿದ್ದ ‘ಕುಂದಾಪುರ ವಾಜಪೇಯಿ’ ಹಾಲಾಡಿ ಶ್ರೀನಿವಾಸ ಶೆಟ್ಟಿ ಅಚ್ಚರಿ ನಿರ್ಧಾರ: ಚುನಾವಣೆಯಿಂದ ನಿವೃತ್ತಿ

ಉಡುಪಿ: ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸದಿರಲು ಕುಂದಾಪುರ ಬಿಜೆಪಿ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ತೀರ್ಮಾನ ಕೈಗೊಂಡಿದ್ದಾರೆ.

ಕುಂದಾಪುರ ಕ್ಷೇತ್ರದ ಜನರು ನನ್ನನ್ನು ಐದು ಬಾರಿ ಆಯ್ಕೆ ಮಾಡಿದ್ದಾರೆ. ಕುಂದಾಪುರ ಶಾಸಕನಾಗಿ ನಿಷ್ಠೆ ಮತ್ತು ಪ್ರೀತಿಯಿಂದ ಕೆಲಸ ಮಾಡಿದ್ದೇನೆ. ಪ್ರಸಕ್ತ ಚುನಾವಣೆಯಲ್ಲಿ ಸ್ವ ಇಚ್ಛೆಯಿಂದ ಸ್ಪರ್ಧಿಸದಿರಲು ನಿರ್ಧಾರ ಕೈಗೊಂಡಿದ್ದೇನೆ. ಐದು ಬಾರಿ ದಾಖಲೆಯ ಮತಗಳಿಂದ ಗೆಲ್ಲಿಸಿದ್ದಕ್ಕೆ ಎಲ್ಲರಿಗೂ ಧನ್ಯವಾದಗಳು ಎಂದು ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ನಾಲ್ಕು ಬಾರಿ ಕುಂದಾಪುರದ ಟಿಕೆಟ್ ನೀಡಿದ ಬಿಜೆಪಿಗೆ ಧನ್ಯವಾದ ಹೇಳುತ್ತೇನೆ. ಪಕ್ಷದ ನಾಯಕರು, ಕಾರ್ಯಕರ್ತರು, ಅಭಿಮಾನಿಗಳಿಗೆ ಚಿರಋಣಿಯಾಗಿದ್ದೇನೆ. ಕುಂದಾಪುರ ಕ್ಷೇತ್ರದ ಮತದಾರರು ಬಿಜೆಪಿ ಅಭ್ಯರ್ಥಿಗೆ ಮತ ನೀಡಿ ಎಂದು ಮನವಿ ಮಾಡಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular