HomeLatest NewsBREAKING : ಚುನಾವಣಾ ರಾಜಕೀಯಕ್ಕೆ ಹಳ್ಳಿಹಕ್ಕಿ ಹೆಚ್. ವಿಶ್ವನಾಥ್ ನಿವೃತ್ತಿ ಘೋಷಣೆ |H. Vishwanath

BREAKING : ಚುನಾವಣಾ ರಾಜಕೀಯಕ್ಕೆ ಹಳ್ಳಿಹಕ್ಕಿ ಹೆಚ್. ವಿಶ್ವನಾಥ್ ನಿವೃತ್ತಿ ಘೋಷಣೆ |H. Vishwanath

ಬೆಂಗಳೂರು: ಕರ್ನಾಟಕ ರಾಜಕೀಯದ ಹಿರಿಯ ಮುತ್ಸದ್ದಿ, ‘ಹಳ್ಳಿಹಕ್ಕಿ’ ಎಂದೇ ಖ್ಯಾತರಾಗಿರುವ ಬಿಜೆಪಿ ವಿಧಾನ ಪರಿಷತ್ ಸದಸ್ಯ ಎಚ್.ವಿಶ್ವನಾಥ್ ಅವರು ಚುನಾವಣಾ ರಾಜಕೀಯದಿಂದ ನಿವೃತ್ತಿ ಘೋಷಿಸಿದ್ದಾರೆ. ಗುರುವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಈ ಮಹತ್ವದ ನಿರ್ಧಾರವನ್ನು ಪ್ರಕಟಿಸಿದ್ದಾರೆ.

ರಾಜಕೀಯ ನಿವೃತ್ತಿ: ಮುಂಬರುವ ಯಾವುದೇ ರೀತಿಯ ಚುನಾವಣೆಗಳಲ್ಲಿ ತಾವು ಸ್ಪರ್ಧಿಸುವುದಿಲ್ಲ ಎಂದು ಎಚ್.ವಿಶ್ವನಾಥ್ ಸ್ಪಷ್ಟಪಡಿಸಿದ್ದಾರೆ. ಈ ಮೂಲಕ ಸುದೀರ್ಘ ಕಾಲದ ತಮ್ಮ ಚುನಾವಣಾ ಪಯಣಕ್ಕೆ ತೆರೆ ಎಳೆದಿದ್ದಾರೆ. ರಾಜಕೀಯದಲ್ಲಿ ಮುಂದುವರೆಯುತ್ತೇನೆ, ಆದರೆ ಚುನಾವಣೆಗೆ ಸ್ಪರ್ಧಿಸುವುದಿಲ್ಲ. ನನ್ನ ಮಕ್ಕಳು ಕೂಡ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ವಿಶ್ವನಾಥ್ ಹೇಳಿದ್ದಾರೆ.

ಬಿಎಸ್‌ವೈ ವಿರುದ್ಧ ವಾಗ್ದಾಳಿ: ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ‘ಅಭಿಮಾನೋತ್ಸವ’ ಆಚರಣೆಯ ಕುರಿತು ವಿಶ್ವನಾಥ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.ಬಿಎಸ್‌ವೈ ಅವರು ಪ್ರಸ್ತುತ ಪೋಕ್ಸೋ (POCSO) ಪ್ರಕರಣದ ಗಂಭೀರ ಆರೋಪ ಎದುರಿಸುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಅಭಿಮಾನೋತ್ಸವ ಮಾಡುವುದು ಎಷ್ಟು ಸರಿ? ಎಂದು ಪ್ರಶ್ನಿಸಿದ್ದಾರೆ.ಪೋಕ್ಸೋ ಪ್ರಕರಣ ಮತ್ತು ಈ ಹೊತ್ತಿನಲ್ಲಿ ನಡೆಯುತ್ತಿರುವ ಅಭಿಮಾನೋತ್ಸವ ಎರಡೂ ರಾಜ್ಯದ ಘನತೆಗೆ ಕಪ್ಪುಚುಕ್ಕೆಯಾಗಿ ಪರಿಣಮಿಸಿವೆ ಎಂದು ಅವರು ಬೇಸರ ವ್ಯಕ್ತಪಡಿಸಿದ್ದಾರೆ. ವಕೀಲರಾಗಿರುವ ಸಿಎಂ ಸಿದ್ದರಾಮಯ್ಯ ಅವರಿಗೆ ಇದೆಲ್ಲಾ ಗೊತ್ತಿಲ್ಲವೇ?” ಎಂದು ಪ್ರಶ್ನಿಸುವ ಮೂಲಕ ಸರ್ಕಾರದ ನಡೆಯನ್ನೂ ಟೀಕಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

LEAVE A REPLY

Please enter your comment!
Please enter your name here

Most Popular