HomeKarnatakaಫೆ. 13ರಿಂದ ಹಂಪಿ ಉತ್ಸವ 2026, ತಯಾರಿ ಹೇಗಿದೆ?

ಫೆ. 13ರಿಂದ ಹಂಪಿ ಉತ್ಸವ 2026, ತಯಾರಿ ಹೇಗಿದೆ?

ವಿಜಯನಗರ ಸಾಮ್ಯಾಜ್ಯದ ಗತವೈಭವ ನೆನಪು ಮಾಡಿಕೊಡುವ ಹಂಪಿ ಉತ್ಸವದ ತಯಾರಿ ನಡೆಯುತ್ತಿದೆ. ಹಂಪಿ ಉತ್ಸವ-2026 ಫೆಬ್ರವರಿ 13,14 ಮತ್ತು 15ರಂದು ನಡೆಯಲಿದೆ. ವಿಜಯನಗರ ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹ್ಮದ್ ಖಾನ್ ಉತ್ಸವದ ವೇದಿಕೆ ನಿರ್ಮಾಣದ ಕುರಿತು ಪರಿಶೀಲನೆ ನಡೆಸಿದರು.

ವಿಜಯನಗರ ಜಿಲ್ಲೆ ಹೊಸಪೇಟೆ ತಾಲ್ಲೂಕಿನ ವಿಶ್ವ ಪ್ರಸಿದ್ಧ ಹಂಪಿಯಲ್ಲಿ ಫೆ.13ರಿಂದ 15ರವರೆಗೆ ಹಂಪಿ ಉತ್ಸವ-2026 ನಡೆಯಲಿದೆ. ಉತ್ಸವಕ್ಕೆ ಭರ್ಜರಿ ತಯಾರಿ ನಡೆಯುತ್ತಿದೆ. ಹ್ಯಾಟ್ರಿಕ್ ಹಿರೋ ಶಿವರಾಜ್ ಕುಮಾರ್ ಈ ಬಾರಿಯ ಉತ್ಸವಕ್ಕೆ ಆಗಮಿಸುತ್ತಿದ್ದಾರೆ.

ಫೆಬ್ರವರಿ 13ರ ಶುಕ್ರವಾರ ಸಂಜೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಂಪಿ ಉತ್ಸವ-2026 ಉದ್ಘಾಟಿಸಲಿದ್ದಾರೆ. ವಿವಿಧ ಜಿಲ್ಲೆಗಳಿಂದ ಉತ್ಸವಕ್ಕೆ ಜನರನ್ನು ಕರೆದುಕೊಂಡು ಬರಲು 20 ಉಚಿತ ಸರ್ಕಾರಿ ಬಸ್‌ಗಳ ವ್ಯವಸ್ಥೆ ಮಾಡಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಹಂಪಿ ಉತ್ಸವದ ಸಿದ್ಧತೆ ಕುರಿತು ಪರಿಶೀಲನೆ ನಡೆಸಲು ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹ್ಮದ್ ಖಾನ್ ಬುಧವಾರದಿಂದಲೇ ಜಿಲ್ಲೆಯಲ್ಲಿ ವಾಸ್ತವ್ಯ ಹೂಡಿದ್ದಾರೆ. ಪ್ರವಾಸಿಗರು, ಉತ್ಸವಕ್ಕೆ ಆಗಮಿಸುವ ಜನರಿಗೆ ಅಗತ್ಯ ಸೌಲಭ್ಯಗಳು ಲಭ್ಯವಾಗುವಂತೆ ಖಾತ್ರಿಪಡಿಸಿಕೊಳ್ಳುತ್ತಿದ್ದಾರೆ.

ಹಂಪಿ ಉತ್ಸವ ಅಂಗವಾಗಿ ವಿವಿಧ ಕಾರ್ಯಕ್ರಮಗಳನ್ನು ಆಯೋಜನೆ ಮಾಡಲಾಗಿದೆ. ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು, ವಿಚಾರ ಸಂಕಿರಣಗಳು, ಸ್ಪರ್ಧೆಗಳ ಮೂಲಕ ಜನರನ್ನು ಸೆಳೆಯಲಾಗುತ್ತಿದೆ.

ಪುರಾತತ್ವ ಇಲಾಖೆ ಹಾಗೂ ಜಿಲ್ಲಾಡಳಿತ, ವಿಜಯನಗರ ಸಹಯೋಗದೊಂದಿಗೆ ಹಂಪಿ ಉತ್ಸವ 2026ರ ಅಂಗವಾಗಿ ಫೆಬ್ರವರಿ 14 & 15ರಂದು ‘ವಿಜಯನಗರ‌’ ಕುರಿತು 28ನೇ‌ ವಾರ್ಷಿಕ ವಿಚಾರ ಸಂಕಿರಣ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ವಿಜಯನಗರ ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ, “ಹಂಪಿ ಉತ್ಸವ-2026 ಫೆಬ್ರವರಿ 13 ರಿಂದ 15ರ ತನಕ ನಡೆಯಲಿದ್ದು, ಅದ್ದೂರಿಯಾಗಿ ಉತ್ಸವ ಆಚರಣೆ ಮಾಡಲು ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ” ಎಂದು ಹೇಳಿದ್ದಾರೆ.

“ಉತ್ಸವಕ್ಕಾಗಿ ಹಂಪಿಯ 5 ತಾಣಗಳಲ್ಲಿ 5 ಪ್ರಮುಖ ವೇದಿಕೆ ನಿರ್ಮಾಣ ಮಾಡಲಾಗಿದೆ. ಫೆಬ್ರವರಿ 13ರಂದು ಸಂಜೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಂಪಿ ಉತ್ಸವ ಉದ್ಘಾಟಿಸಲಿದ್ದಾರೆ. ಮುಖ್ಯ ವೇದಿಕೆಯಲ್ಲಿ ಸ್ಥಳೀಯ ಕಲಾವಿದರಿಗೆ ವಿಶೇಷ ಆದ್ಯತೆ ನೀಡಲಾಗಿದೆ” ಎಂದರು.

ವೇದಿಕೆಗಳಿಗೆ ಎಂ.ಪಿ.ಪ್ರಕಾಶ್, ಕೃಷ್ಣ ದೇವರಾಯ, ವಿದ್ಯಾರಣ್ಯ, ಹಕ್ಕಬುಕ್ಕ ವೇದಿಕೆ ಎಂದು ನಾಮಕರಣ ಮಾಡಲಾಗಿದೆ. ಉತ್ಸವದ ಕೊನೆಯ ದಿನ ಶಿವರಾತ್ರಿ ಇರುವ ಕಾರಣಕ್ಕೆ ಸಾಂಸ್ಕೃತಿ ಕಾರ್ಯಕ್ರಮಗಳಲ್ಲಿ ಶಿವನಿಗೆ ಸಂಬಂಧಿಸಿದ ಹಾಡು, ನೃತ್ಯಕ್ಕೆ ಹೆಚ್ಚಿನ ಆದ್ಯತೆ ನೀಡಲಾಗಿದೆ.

For Latest News Updates, Join Our Whatsapp Community🚩
Abinandan
Abinandan
ನಿವೇದಿತಾ ಬಿ.ಎ.. ಬಿ.ಎಡ್ ಪದವೀಧರರು. ಡಿಜಿಟಲ್ ಪತ್ರಿಕೋದ್ಯಮದಲ್ಲಿ ಕಳೆದ 4 ವರ್ಷಗಳಿಂದ ಸಕ್ರಿಯರಾಗಿದ್ದಾರೆ. Revenufacts ವೆಬ್‌ಸೈಟ್‌ನಲ್ಲಿ 3 ವರ್ಷ ಹಾಗೂ ಕರುನಾಡು ಸುದ್ದಿ ಮಾಧ್ಯಮದಲ್ಲಿ 1 ವರ್ಷ ಕಾರ್ಯನಿರ್ವಹಿಸಿದ ಅನುಭವ ಹೊಂದಿದ್ದಾರೆ. ಆರೋಗ್ಯ, ವಾಣಿಜ್ಯ, ಲೈಫ್‌ಸ್ಟೈಲ್ ವಿಭಾಗದಲ್ಲಿ ವಿಶೇಷ ಪರಿಣತಿ ಹೊಂದಿದ್ದಾರೆ. Nivedita is a skilled digital content creator with a strong academic background in B.A. and B.Ed. 4 years of experience in digital journalism.
RELATED ARTICLES

LEAVE A REPLY

Please enter your comment!
Please enter your name here

Most Popular