HomeUncategorizedBIG NEWS: ಹಂಪಿ ವಿರೂಪಾಕ್ಷ ದೇವಾಲಯದ ಬಳಿ ಚಿರತೆ ಪ್ರತ್ಯಕ್ಷ

BIG NEWS: ಹಂಪಿ ವಿರೂಪಾಕ್ಷ ದೇವಾಲಯದ ಬಳಿ ಚಿರತೆ ಪ್ರತ್ಯಕ್ಷ

ವಿಜಯನಗರ: ರಾಜ್ಯದಲ್ಲಿ ಹಲವು ಜಿಲ್ಲೆಗಳಲ್ಲಿ ಚಿರತೆ ಉಪಟಳ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಮೈಸೂರು, ಚಾಮರಾಜನಗರ, ಹಾಸನ, ಉತ್ತರ ಕನ್ನಡ ಜಿಲ್ಲೆಗಳ ಭಾಗದಲ್ಲಿ ಹೆಚ್ಚಾಗಿ ಕಾಣಿಸಿಕೊಳ್ಳುತ್ತಿದ್ದ ಚಿರತೆಗಳು ಇದೀಗ ಹಂಪಿಯಲ್ಲಿಯೂ ಪ್ರತ್ಯಕ್ಷವಾಗಿವೆ.

ವಿಜಯನಗರ ಜಿಲ್ಲೆ ಹೊಸಪೇಟೆ ತಾಲೂಕಿನ ಐತಿಹಾಸಿಕ ಹಂಪಿಯ ಜನತಾ ಪ್ಲಾಟ್ ಪ್ರದೇಶದಲ್ಲಿ ಚಿರತೆ ಕಾಣಿಸಿಕೊಂಡಿದೆ. ಶ್ರೀ ವಿರೂಪಾಕ್ಷ ದೇಗುಲದ ಕೂಗಳತೆ ದೂರದಲ್ಲಿಯೇ ಚಿರತೆ ಕಂಡು ಬಂದಿರುವುದು ಪ್ರವಾಸಿಗರಲ್ಲಿ ಆತಂಕಕ್ಕೆ ಕಾರಣವಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ವಿರೂಪಾಕ್ಷ ದೇವಾಲಯದ ಬಳಿ ಸುತ್ತಮುತ್ತ ಹಾಗೂ ಜನತಾ ಪ್ಲಾಟ್ ಪ್ರದೇಶದಲ್ಲಿ ಚಿರತೆ ಓಡಾಡಿರುವ ದೃಶ್ಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಚಿರತೆ ಓಡಾಡುತ್ತಿರುವುದನ್ನು ಕಂಡು ಜನರು ಕಂಗಾಲಾಗಿದ್ದಾರೆ. ಶೀಘ್ರವಾಗಿ ಚಿರತೆ ಸೆರೆ ಹಿಡಿಯುವಂತೆ ಅರಣ್ಯ ಇಲಾಖೆಗೆ ಒತ್ತಾಯಿಸಿದ್ದಾರೆ.

ಐತಿಹಾಸಿಕ ಹಂಪಿ ಉತ್ಸವಕ್ಕೆ ಭಾನುವಾರ ಅದ್ಧೂರಿ ತೆರೆಬಿದ್ದಿದೆ. ಹಂಪಿಯಲ್ಲಿ ಪ್ರವಾಸಿಗರ ದಂಡೇ ಬೀಡುಬಿಟ್ಟಿದೆ. ಇಂತಹ ಸಂದರ್ಭದಲ್ಲಿಯೇ ಹಂಪಿಯಲ್ಲಿ ಚಿರತೆ ಪ್ರತ್ಯಕ್ಷವಾಗಿರುವುದು ಪ್ರವಾಸಿಗರನ್ನು ಇನ್ನಷ್ಟು ಆತಂಕಕ್ಕೀಡು ಮಾಡುವಂತೆ ಮಾಡಿದೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular