HomeKarnatakaBIG NEWS: ಸಂತ್ರಸ್ತೆಗೆ ಹಣ ಕೊಟ್ಟು ಗ್ಯಾಂಗ್ ರೇಪ್ ಕೇಸ್ ಹಿಂಪಡೆಯುವಂತೆ ಹೇಳಿದ್ದ ಪೊಲೀಸರು: ಮಾಜಿ...

BIG NEWS: ಸಂತ್ರಸ್ತೆಗೆ ಹಣ ಕೊಟ್ಟು ಗ್ಯಾಂಗ್ ರೇಪ್ ಕೇಸ್ ಹಿಂಪಡೆಯುವಂತೆ ಹೇಳಿದ್ದ ಪೊಲೀಸರು: ಮಾಜಿ ಸಿಎಂ ಬೊಮ್ಮಾಯಿ ಗಂಭೀರ ಆರೋಪ

ಹಾವೇರಿ: ಹಾನಗಲ್ ನಲ್ಲಿ ಮಹಿಳೆ ಮೇಲೆ ಗ್ಯಾಂಗ್ ರೇಪ್ ಪ್ರಕರಣವನ್ನು ಮುಚ್ಚಿ ಹಾಕಲು ಪೊಲೀಸರು ಯತ್ನಿಸಿದ್ದರು ಎಂದು ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಆರೋಪಿಸಿದ್ದಾರೆ.

ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಮಾಜಿ ಸಿಎಂ ಬೊಮ್ಮಾಯಿ, ಸಾಮೂಹಿಕ ಅತ್ಯಾಚಾರ ಪ್ರಕರಣ ಮುಚ್ಚಿ ಹಾಕುವ ಪೊಲೀಸರ ಯತ್ನ ವಿಫಲವಾಗಿದೆ. ಸಂತ್ರಸ್ತೆಗೆ ಹಣ ಕೊಟ್ಟು ಪ್ರಕರಣವನ್ನು ಹಿಂಪಡೆಯುವಂತೆ ಹೇಳಿದ್ದರು. ಈ ವಿಚಾರ ಇದೀಗ ಬಹಿರಂಗವಾಗಿದೆ. ಸ್ಥಳೀಯ ಪೊಲೀಸರು ಪ್ರಕರಣ ಮುಚ್ಚಿ ಹಾಕುವ ಯತ್ನ ಮಾಡಿದ್ದಾರೆ ಎಂದು ಕಿಡಿಕಾರಿದರು.

ಪ್ರಕರಣದ ತನಿಖೆಯನ್ನು ಎಸ್ ಐಟಿಗೆ ಕೊಡಬೇಕು. ತನಿಖೆ ನೆಪದಲ್ಲಿ ರಾಜಕೀಯ ಮಾಡುತ್ತಿದ್ದಾರೆ. ಪೊಲೀಸರಿಂದ ನಾವೇನೂ ನಿರೀಕ್ಷೆ ಮಾಡಲು ಆಗಲ್ಲ ಎಂದು ಹೇಳಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular