HomeKarnatakaಪೊಲೀಸರು ಸರ್ಕಾರದ ಕೈಗೊಂಬೆಯಂತಾಗಿದ್ದಾರೆ; ಗ್ಯಾಂಗ್ ರೇಪ್ ಕೇಸ್ ಮುಚ್ಚಿ ಹಾಕುವಲ್ಲಿ ಪೊಲೀಸರೇ ಭಾಗಿ; ಬಿ.ವೈ.ವಿಜಯೇಂದ್ರ ಆರೋಪ

ಪೊಲೀಸರು ಸರ್ಕಾರದ ಕೈಗೊಂಬೆಯಂತಾಗಿದ್ದಾರೆ; ಗ್ಯಾಂಗ್ ರೇಪ್ ಕೇಸ್ ಮುಚ್ಚಿ ಹಾಕುವಲ್ಲಿ ಪೊಲೀಸರೇ ಭಾಗಿ; ಬಿ.ವೈ.ವಿಜಯೇಂದ್ರ ಆರೋಪ

ಹಾವೇರಿ: ಹಾನಗಲ್ ಗ್ಯಾಂಗ್ ರೇಪ್ ಪ್ರಕರಣ ಮುಚ್ಚಿ ಹಾಕುವಲ್ಲಿ ಪೊಲೀಸರೇ ಭಾಗಿಯಾಗಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆರೋಪಿಸಿದ್ದಾರೆ.

ಹಾವೇರಿ ಜಿಲ್ಲೆಯ ಬ್ಯಾಡಗಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಪೊಲೀಸರು ರಾಜ್ಯ ಸರ್ಕಾರದ ಕೈಗೊಂಬೆಯಾಗಿದ್ದಾರೆ. ಗ್ಯಾಂಗ್ ರೇಪ್ ಪ್ರಕರಣ ಮುಚ್ಚಿ ಹಾಕುವ ಕೆಲಸದಲ್ಲಿ ಭಾಗಿಯಾಗಿದ್ದಾರೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ ಎಂದು ಕಿಡಿಕಾರಿದರು.

ನೀಚ ಘಟನೆ ನಡೆದಿದೆ. ಈ ವಿಚಾರದಲ್ಲಿಯೂ ರಾಜಕೀಯ ಮಡಬಾರದು. ಈ ಪ್ರಕರಣವನ್ನು ಸರ್ಕಾರ ಹಗುರವಾಗಿ ತೆಗೆದುಕೊಂಡಿದೆ. ಅಲ್ಪಸಂಖ್ಯಾತ ಮಹಿಳೆಗೆ ರಕ್ಷಣೆ ಇಲ್ಲ ಎಂದರೆ ಈ ಸರ್ಕಾರ ಯಾಕೆ ಬೇಕು? ಎಂದು ಪ್ರಸ್ನಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular